ಲೂಧಿಯಾನ ಫ್ಯಾಕ್ಟರಿಯಲ್ಲಿ ಗ್ಯಾಸ್ ಲೀಕ್ – 9 ಮಂದಿ ಸಾವು

ಚಂಡೀಗಢ: ಕಾರ್ಖಾನೆಯೊಂದರಲ್ಲಿ (Factory)  ವಿಷ ಅನಿಲ ಸೋರಿಕೆಯಾದ (Gas Leak) ಪರಿಣಾಮ 9 ಜನರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಪಂಜಾಬ್‌ನ (Punjab) ಲೂಧಿಯಾನದಲ್ಲಿ (Ludhiana) ಭಾನುವಾರ ನಡೆದಿದೆ.

ಲೂಧಿಯಾನದ ಶೇರ್‌ಪುರ್ ಚೌಕ್ ಬಳಿಯ ಸುವಾ ರಸ್ತೆಯಲ್ಲಿರುವ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆಯಾಗಿದೆ. ಭಾನುವಾರ ಬೆಳಗ್ಗೆ 7:15ರ ವೇಳೆಗೆ ಅನಿಲ ಸೋರಿಕೆಯಾಗಿರುವುದು ಗಮನಕ್ಕೆ ಬಂದಿದೆ. ಘಟನೆಯಲ್ಲಿ 9 ಜನರು ಸಾವನ್ನಪ್ಪಿದ್ದು ಹತ್ತಾರು ಜನರು ವಿಷ ಅನಿಲ ಸೇವಿಸಿ ಅಸ್ವಸ್ಥರಾಗಿದ್ದಾರೆ. ಕಾರ್ಖಾನೆಯಲ್ಲಿ ಇನ್ನೂ ಅನೇಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ವರದಿಗಳ ಪ್ರಕಾರ ಡೈರಿ ಉತ್ಪನ್ನಗಳನ್ನು ಉತ್ಪಾದಿಸುವ ಕಾರ್ಖಾನೆಯಾದ ಗೋಯಲ್ ಮಿಲ್ಕ್ ಪ್ಲಾಂಟ್‌ನ ಕೂಲಿಂಗ್ ಸಿಸ್ಟಮ್‌ನಿಂದ ಅನಿಲ ಸೋರಿಕೆಯಾಗಿದೆ. ಇದರಿಂದ ಸಮೀಪದ ನಿವಾಸಿಗಳು ತಮ್ಮ ಮನೆಗಳಲ್ಲಿಯೇ ಮೂರ್ಛೆ ಹೋಗಿದ್ದಾರೆ. ಅನಿಲ ಸೋರಿಕೆ ವಿಚಾರ ಬೆಳಕಿಗೆ ಬರುತ್ತಲೇ ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿದ್ದು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಸ್ಮಾರ್ಟ್ ಕ್ಲಾಸ್‍ನಲ್ಲಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ಶೋ- ಶಿಕ್ಷಕ ಅರೆಸ್ಟ್

ಭಟಿಂಡಾದಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯನ್ನು (NDRF) ರಕ್ಷಣಾ ಕಾರ್ಯಾಚರಣೆಗೆ ಕರೆಸಲಾಗಿದ್ದು, ರಕ್ಷಣಾ ತಂಡ ಇಡೀ ಪ್ರದೇಶವನ್ನು ಸುತ್ತುವರಿದಿದೆ. ಗ್ಯಾಸ್ ಲೀಕ್ ಆಗಿರುವ ಪ್ರದೇಶದೆಡೆಗೆ ಯಾರೂ ಪ್ರವೇಶಿಸದಂತೆ ತಡೆಯಲಾಗಿದೆ. ಇದನ್ನೂ ಓದಿ: ಅಲ್‍ಖೈದಾ ಜೊತೆ ನಂಟು ಶಂಕೆ – ಶಂಕಿತ ಭಯೋತ್ಪಾದಕನ ಸೆರೆ