ರಾಜಕೀಯದಲ್ಲಿ ಸಿಕ್ಸರ್ ಸಿಡಿಸಿದ ಗಂಭೀರ್

ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ರಿಕೆಟ್ ಆಟಗಾರ ಗೌತಮ್ ಗಂಭೀರ್ ಗೆಲುವಿನೊಂದಿಗೆ ತಮ್ಮ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ್ದಾರೆ.

ನವದೆಹಲಿಯ ಪೂರ್ವ ಡೆಲ್ಲಿ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದ ಗಂಭೀರ್ 3,91,22 ಭಾರೀ ಅಂತರದ ಮತಗಳ ಗೆಲುವು ಪಡೆದಿದ್ದಾರೆ. ಕಳೆದ ತಿಂಗಳಷ್ಟೇ ಬಿಜೆಪಿ ಸೇರಿ ರಾಜಕೀಯ ಪ್ರವೇಶ ಮಾಡಿದ್ದ 37 ವರ್ಷದ ಗಂಭೀರ್, ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರಭಾವಿತರಾಗಿ ರಾಜಕೀಯ ಪ್ರವೇಶ ಮಾಡುತ್ತಿರುವುದಾಗಿ ತಿಳಿಸಿದ್ದರು.

ಗಂಭೀರ್ 6,96,156 ಮತ ಪಡೆದಿದ್ದರೆ, ಆಪ್ ಪಕ್ಷದ ಅತೀಶಿ 2,19,328 ಮತ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಅರವಿಂದ್ 3,04,934 ಮತ ಪಡೆದು 2ನೇ ಅತಿ ಹೆಚ್ಚು ಮತ ಪಡೆದ ಅಭ್ಯರ್ಥಿಯಾಗಿದ್ದಾರೆ. ಈ ಮೂಲಕ ಎಎಪಿ ಪಕ್ಷ ಮುಖಭಂಗ ಅನುಭವಿಸಿದೆ. ದೆಹಲಿಯ 7 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಪಡೆದಿದೆ.

2011 ವಿಶ್ವಕಪ್ ಹಾಗೂ 2007ರ ಟಿ20 ವಿಶ್ವಕಪ್ ತಂಡದ ಸದಸ್ಯರಾಗಿದ್ದ ಗಂಭೀರ್, ಟೀಂ ಇಂಡಿಯಾ ಪರ 58 ಟೆಸ್ಟ್ ಮತ್ತು 147 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಟೀಂ ಇಂಡಿಯಾ ಪರ ಆರಂಭಿಕರಾಗಿ 15 ವರ್ಷ ಆಡಿದ್ದು, ಪದ್ಮ ಶ್ರೀ ಪ್ರಶಸ್ತಿ ಕೂಡ ಲಭಿಸಿದೆ.

Comments

Leave a Reply

Your email address will not be published. Required fields are marked *