ಹಿಂದೂ ಉತ್ತರಾಧಿಕಾರ ಕಾಯ್ದೆಯಲ್ಲಿ ಲಿಂಗ ಪಕ್ಷಪಾತ ಇದೆಯೇ: ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

SUPREME COURT

ನವದೆಹಲಿ: ಹಿಂದೂ ಉತ್ತರಾಧಿಕಾರ ಕಾಯ್ದೆಯಲ್ಲಿ ಲಿಂಗ ಪಕ್ಷಪಾತ ಇದೆಯೇ ಎಂದು ಪ್ರಶ್ನಿಸಿರುವ ಸುಪ್ರೀಂ ಕೋರ್ಟ್‌, ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಗುಡುವು ನೀಡಿದೆ.

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತ ಚರ್ಚೆಯಲ್ಲಿ ಹಿಂದೂ ಉತ್ತರಾಧಿಕಾರ ಕಾಯ್ದೆಯ ಸೆಕ್ಷನ್‌ಗಳು ಅಸಾಂವಿಧಾನಿಕ ಮತ್ತು ಲಿಂಗ ಸಮಾನತೆಯನ್ನು ಉಲ್ಲಂಘಿಸುತ್ತವೆ ಎಂದು ಆರೋಪಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಿಚಾರಣೆ ನಡೆಸಿತು. ಇದನ್ನೂ ಓದಿ: ಬಿಜೆಪಿ ಕಂಪನಿಯಾಗಿ ಮಾರ್ಪಟ್ಟಿದೆ: ಅಖಿಲೇಶ್ ಯಾದವ್

ಈ ವಿಚಾರಕ್ಕೆ ಸಂಬಂಧಿಸಿದಂತೆ ನಾಲ್ಕು ವಾರಗಳ ಒಳಗೆ ಪ್ರತಿಕ್ರಿಯೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಕಾಲಾವಕಾಶ ನೀಡಿದೆ.

ಹಿಂದೂ ಮಹಿಳೆಯರ ಪರವಾಗಿ ನ್ಯಾಯಾಲಯವು ಮಧ್ಯಪ್ರವೇಶಿಸಬೇಕು. ಏಕೆಂದರೆ ಸಮಾಜವು ಲಿಂಗ ಸಮಾನತೆಯತ್ತ ಸಾಗುತ್ತಿರುವಾಗ, ಹಿಂದೂ ಉತ್ತರಾಧಿಕಾರ ಕಾಯಿದೆಯು ಲಿಂಗದ ಆಧಾರದ ಮೇಲೆ ತಾರತಮ್ಯ ಮಾಡುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಹನುಮಾನ್ ಚಾಲೀಸಾ ಹಾಕಲು ಲೌಡ್ ಸ್ಪೀಕರ್- ಬಿಜೆಪಿ ನಾಯಕನ ಆಫರ್

ಕಮಲ್ ಅನಂತ್ ಖೋಪ್ಕರ್ ಅವರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಸೂರ್ಯ ಕಾಂತ್ ಮತ್ತು ಬೇಲಾ ತ್ರಿವೇದಿ ಅವರ ತ್ರಿಸದಸ್ಯ ಪೀಠವು ಕೈಗೆತ್ತಿಕೊಂಡಿತು.

ಹಿಂದೂ ಉತ್ತರಾಧಿಕಾರ ಕಾಯ್ದೆಯ ನಿಬಂಧನೆಗಳಲ್ಲಿ ʼಆಳವಾಗಿ ಬೇರೂರಿರುವ ಪಿತೃಪ್ರಭುತ್ವದ ಸಿದ್ಧಾಂತʼವನ್ನು ಸೂಚಿಸುತ್ತದೆ. ಮೃತಪಟ್ಟ ಮಹಿಳೆಯ ಸ್ವಂತ ಪೋಷಕರಿಗಿಂತ ಮೊದಲು ಗಂಡನ ಕುಟುಂಬವು ಉತ್ತರಾಧಿಕಾರದ ಸಾಲಿನಲ್ಲಿ ಹೇಗೆ ಮೊದಲ ಸ್ಥಾನದಲ್ಲಿದೆ ಎಂಬುದನ್ನು ತೋರಿಸುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಹಿಂದೂ ಉತ್ತರಾಧಿಕಾರ ಕಾಯ್ದೆಯಲ್ಲಿನ ನಿಬಂಧನೆಗಳು, ಪುರುಷ ವಂಶಾವಳಿಯೊಳಗೆ ಆಸ್ತಿಯನ್ನು ಹೆಚ್ಚಾಗಿ ಉಳಿಸಿಕೊಳ್ಳುವಂತೆಯೇ ಇದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಗಾಂಧಿ ಕುಟುಂಬದಿಂದಾಚೆಗೆ ಕಾಂಗ್ರೆಸ್‌ ಪಕ್ಷ ಕಾಣುವುದೇ ಇಲ್ಲ: ಅನುರಾಗ್‌ ಠಾಕೂರ್‌

ಆಚರಣೆ ಅಥವಾ ಧರ್ಮದ ಆಧಾರದ ಮೇಲೆ ವೈಯಕ್ತಿಕ ಕಾನೂನನ್ನು ಸ್ಥಾಪಿಸಲಾಗಿದೆಯೇ? ಅದನ್ನು ಕ್ರೋಡೀಕರಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದು ಅಪ್ರಸ್ತುತವಾಗಿದೆ. ಇದು ಲಿಂಗ ಸಮಾನತೆಯನ್ನು ಉಲ್ಲಂಘಿಸಿದರೆ, ಅದನ್ನು ಪ್ರಶ್ನಿಸಬಹುದು ಎಂದು ಅರ್ಜಿದಾರರು ಹೇಳಿದ್ದಾರೆ.

Comments

Leave a Reply

Your email address will not be published. Required fields are marked *