ಚಿಕಿತ್ಸೆಯ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕೂಡಿಹಾಕಿ ವೈದ್ಯನಿಂದಲೇ ರೇಪ್!

ಲಕ್ನೋ: ಉತ್ತರ ಪ್ರದೇಶದ ಶಹಜಹಾನ್‍ಪುರದ ವೈದ್ಯನೊಬ್ಬ ಅಪ್ರಾಪ್ತ ಬಾಲಕಿಯನ್ನು ಕೂಡಿಹಾಕಿ ಆಕೆ ಮೇಲೆ ನಿರಂತರ ಅತ್ಯಾಚಾರ ಎಸಗಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಆರೋಪಿಯನ್ನು ವಿನೋದ್ ಕುಮಾರ್ ಎಂದು ಗುರುತಿಸಲಾಗಿದ್ದು, ವೃತ್ತಿಯಲ್ಲಿ ಆತ ವೈದ್ಯನಾಗಿದ್ದಾನೆ. ಆರೋಪಿಯು ಬಾಲಕಿಗೆ ಚಿಕಿತ್ಸೆ ಹಾಗೂ ಕೆಲಸ ಕೊಡಿಸುವುದಾಗಿ ನಂಬಿಸಿ ಕರೆದೊಯ್ದು, ಸಣ್ಣ ಕೋಣೆಯೊಂದರಲ್ಲಿ ಕೂಡಿಹಾಕಿದ್ದ. ಅಲ್ಲದೇ ಹಲವು ದಿನಗಳಿಂದ ನಿರಂತರವಾಗಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಈ ಘಟನೆಯ ಕುರಿತು ಬಾಲಕಿ ವೈದ್ಯನಿಂದ ತಪ್ಪಿಸಿಕೊಂಡು ಬಂದ ಮೇಲೆ ಪೋಷಕರಿಗೆ ತಿಳಿಸಿದ್ದಾಳೆ.

ವಿಷಯ ತಿಳಿದ ಬಳಿಕ ಬಾಲಕಿಯ ಹೆತ್ತವರು ಆರೋಪಿ ಮೇಲೆ ದೂರು ದಾಖಲಿಸಲು ಸ್ಥಳೀಯ ಪೊಲೀಸ್ ಠಾಣೆಗೆ ಹೋದಾಗ, ಪೊಲೀಸರು ದೂರು ಪಡೆಯಲು ನಿರಾಕರಿಸಿ ಆರೋಪವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ.

ನಂತರ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ತೆರಳಿ, ವಿನೋದ್ ಕುಮಾರ್ ಬಳಿ ನಮ್ಮ ಮಗಳಿಗೆ ಚಿಕಿತ್ಸೆ ಕೊಡಿಸುತ್ತಿದ್ದೆವು. ಚಿಕಿತ್ಸೆ ನೆಪದಲ್ಲಿ ಅವಳನ್ನು ಫಾರುಖಾಬಾದ್‍ಗೆ ಕರೆದೊಯ್ದು ಆಕೆಯ ಮೇಲೆ ವೈದ್ಯ ಅತ್ಯಾಚಾರ ಎಸಗಿದ್ದಾನೆ ಬಾಲಕಿಯ ಪೋಷಕರು ದೂರು ನೀಡಿದ್ದಾರೆ.

ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದ್ದು ಬಾಲಕಿಗೆ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *