ಕೊಪ್ಪಳ: ಯುವಕ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ತಾಲೂಕಿನ ಹನಕುಂಟಿ ಗ್ರಾಮದ 23 ವರ್ಷದ ಸುಮಿತ್ರಾ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ನಾಲ್ಕು ವರ್ಷದ ಹಿಂದೆ ಸಿದ್ದನಗೌಡ ಎಂಬಾತನೊಂದಿಗೆ ಇವರ ಮದುವೆ ನಿಶ್ಚಿತಾರ್ಥವಾಗಿತ್ತು. ಮದುವೆಗೆ ಮುನ್ನವೇ ಸಿದ್ದನಗೌಡ ಯುವತಿಯನ್ನ ಲೈಂಗಿಕವಾಗಿ ಬಳಸಿಕೊಂಡಿದ್ದ. ಆದರೆ ಈಗ ಮದುವೆ ಮಾಡಿಕೊಳ್ಳಲು ಹಿಂದೇಟು ಹಾಕುತ್ತಿದ್ದ ಎನ್ನಲಾಗಿದೆ.

ಇದ್ರಿಂದ ಮನನೊಂದು ಯುವತಿ ಅಕ್ಟೋಬರ್ 27 ರಂದು ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದರು. ಚಿಕಿತ್ಸೆಗೆಂದು ಯುವತಿಯನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಪಿದ್ದಾರೆ.






Leave a Reply