ಕಬ್ಬನ್ ಪಾರ್ಕ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ

ಬೆಂಗಳೂರು: ನಗರ ಪ್ರಖ್ಯಾತ ಉದ್ಯಾವನವಾದ ಕಬ್ಬನ್ ಪಾರ್ಕ್ ನಲ್ಲಿ ಅನುಮಾನಸ್ಪದ ರೀತಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆಯಾಗಿದೆ.

ಸುಮಾರು 18 ವರ್ಷದ ಸಂತೋಷಿ ನೇಣಿಗೆ ಶರಣಾದ ಯುವತಿ ಎಂದು ಗುರುತಿಸಲಾಗಿದೆ. ಮೃತ ಸಂತೋಷಿ ತಾನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಸಂತೋಷಿ ಶನಿವಾರ ಪಾರ್ಕ್ ಗೆ ಬಂದು ಮರವೊಂದಕ್ಕೆ ತನ್ನ ದುಪ್ಪಟ್ಟದಿಂದ ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಂದು ಬೆಳಗ್ಗೆ ಉದ್ಯಾನವನದ ಸಿಬ್ಬಂದಿ ಗಮನಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ಯುವತಿಯ ಮೃತ ದೇಹ ನೋಡಿ ಕೂಡಲೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದ ಕಬ್ಬನ್ ಪಾರ್ಕ್ ಪೊಲೀಸರು ಸ್ಥಳಕ್ಕೆ ಬಂದು ಮೃತ ಯುವತಿಯ ದೇಹವನ್ನು ಕೆಳಗಿಳಿಸಿ ಮರಣೋತ್ತರ ಪರೀಕ್ಷೆಗೆಂದು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಕಬ್ಬನ ಪಾರ್ಕ್ ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ. ಸದ್ಯಕ್ಕೆ ಯುವತಿ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ನಿಖರವಾಗಿ ತಿಳಿದು ಬಂದಿಲ್ಲ. ಪೊಲೀಸರ ತನಿಖೆ ಬಳಿಕ ಸತ್ಯತೆ ತಿಳಿಯಲಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *