ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು ತಂದೆಯನ್ನೇ ಹತ್ಯೆಗೈದ ಬಾಲಕಿ

ಚೆನ್ನೈ: ಕೆಲವು ದಿನಗಳ ಹಿಂದೆ ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು ಅಪ್ರಾಪ್ತ ಬಾಲಕಿಯೇ ತನ್ನ ತಂದೆಯನ್ನು ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಕುರಿತಂತೆ ಪೊಲೀಸರು, ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು ಬಾಲಕಿ ಆತ್ಮರಕ್ಷಣೆಗಾಗಿ ತನ್ನ ತಂದೆಯನ್ನೇ ಕೊಲೆ ಮಾಡಿದ್ದಾಳೆ. ಕೆಲವು ದಿನಗಳ ಹಿಂದೆ ಬಾಲಕಿ ಬಟ್ಟೆ ಒಗೆಯುವ ಕೆಲಸದಿಂದ ಮನೆಗೆ ಹಿಂದಿರುಗಿದ ಬಳಿಕ ತನ್ನ ತಂದೆಯನ್ನು ಕೊಲೆ ಮಾಡಿರುವುದಾಗಿ ನೆರೆಹೊರೆಯವರ ಬಳಿ ಹೇಳಿಕೊಂಡಿದ್ದಾಳೆ. ಈ ಹಿಂದೆ ಈ ಪ್ರಕರಣ ಕುರಿತಂತೆ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿದ್ದರು. ಆದರೆ ಇದೀಗ ತನಿಖೆ ಬಳಿಕ 40 ವರ್ಷದ ತನ್ನ ತಂದೆಯನ್ನು ಕೊಂದಿದ್ದು, ಮಗಳೇ ಎಂಬ ವಿಚಾರ ಬೆಳಕಿಗೆ ಬಂದಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸೆ.28 ರವರೆಗೆ ರಾಜ್ಯದಲ್ಲಿ ಮಳೆ – ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಮದ್ಯವ್ಯಸನರಾಗಿದ್ದ ತಂದೆ ನೀಡುತ್ತಿದ್ದ ಹಿಂಸೆಯನ್ನು ಸಹಿಸಲಾಗದೇ ಬಾಲಕಿಯೆ ತಂದೆಯನ್ನು ಕೊಲೆಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಇನ್ನೂ ಈ ವಿಚಾರವಾಗಿ ಕಾನೂನು ತಜ್ಞರನ್ನು ಸಂಪರ್ಕಿಸಿದಾಗ ಭಾರತೀಯ ದಂಡ ಸಂಹಿತೆ ಸೆಕ್ಷನ್ 100ರ ಅಡಿ ಖಾಸಗಿ ರಕ್ಷಣೆಯ ಹಕ್ಕನ್ನು ಜಾರಿಗೊಳಿಸಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ನಾವು ಆಕೆಯನ್ನು ಮುಕ್ತಗೊಳಿಸಿದ್ದೇವೆ ಎಂದು ವಿಲ್ಲುಪುರಂ ಪೊಲೀಸ್ ಅಧಿಕಾರಿ ಎನ್. ಶ್ರೀನಾಥ್ ತಿಳಿಸಿದ್ದಾರೆ.

ವಿಚಾರಣೆ ವೇಳೆ ಬಾಲಕಿ ತನ್ನ ತಾಯಿ ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದು, ಆಕೆಯ ಅಕ್ಕ 160 ಕಿ.ಮೀ ದೂರದಲ್ಲಿರುವ ಚೆನ್ನೈನ ಜವಳಿ ಅಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿಸಿದ್ದಾಳೆ ಮತ್ತು ಆಕೆ ತನ್ನ ತಂದೆಯೊಟ್ಟಿಗೆ ವಾಸಿಸುತ್ತಿರುವುದಾಗಿ ಹೇಳಿಕೊಂಡಿದ್ದಾಳೆ. ಇದೀಗ ಬಾಲಕಿಯನ್ನು ಬಾಲಗೃಹಕ್ಕೆ ಸ್ಥಳಾಂತರಿಸಲಾಗಿದ್ದು, ಈಗ ಬಾಲಕಿ ಕ್ಷೇಮವಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಓವೈಸಿ ಮನೆ ಮೇಲೆ ದಾಳಿ ಪ್ರಕರಣ -ನಾಲ್ವರು ಆರೋಪಿಗಳು ಪೊಲೀಸ್ ಕಸ್ಟಡಿಗೆ

Comments

Leave a Reply

Your email address will not be published. Required fields are marked *