ಬೆಂಗಳೂರು: ಸಿಲಿಕಾನ್ ಸಿಟಿಯ ಶಾಲೆಯೊಂದರಲ್ಲಿ ಶಾಕಿಂಗ್ ಸ್ಟೋರಿ ಬೆಳಕಿಗೆ ಬಂದಿದ್ದು, ಏಳನೇ ತರಗತಿಯ ಇಬ್ಬರು ವಿಧ್ಯಾರ್ಥಿನಿಯರ ನಡುವೆ ಲೈಂಗಿಕ ಕ್ರಿಯೆಯ ಬಗ್ಗೆ ಚರ್ಚೆ ನಡೆದಿದೆ.
ವಿದ್ಯಾರ್ಥಿನಿಯೊಬ್ಬಳು ಗಂಡು-ಹೆಣ್ಣಿನ ಖಾಸಗಿ ಕ್ಷಣಗಳ ಸ್ಕೆಚ್ ಬರೆಯುವಂತೆ ಪೀಡಿಸಿದ್ದಾಳೆ. ತನ್ನ ಸಹಪಾಠಿ ವಿದ್ಯಾರ್ಥಿನಿಯ ಪ್ರಶ್ನೆಯಿಂದ ಮತ್ತೋರ್ವ ವಿದ್ಯಾರ್ಥಿನಿ ಅತಂಕಕ್ಕೀಡಾಗಿದ್ದಳು. ಅಲ್ಲದೆ ಸಹಪಾಠಿ ನಿರಂತರ ಕಿರುಕುಳ ನೀಡುತ್ತಿದ್ದಳು. ಸಹಪಾಟಿಯ ಕಿರುಕುಳ ತಾಳಲಾರದೇ ಬಾಲಕಿ ಈ ಬಗ್ಗೆ ತನ್ನ ಪೋಷಕರ ಬಳಿ ಅಳಲು ತೋಡಿಕೊಂಡಿದ್ದಾಳೆ.

ಈ ವಿಚಾರ ತಿಳಿದ ಬಾಲಕಿ ಪೋಷಕರು, ಒತ್ತಾಯ ಮಾಡ್ತಿದ್ದ ಬಾಲಕಿ ಮನೆ ಬಳಿ ಹೋಗಿ ಗಲಾಟೆ ಮಾಡಿದ್ದಾರೆ. ಈ ವೇಳೆ ಇಬ್ಬರು ವಿದ್ಯಾರ್ಥಿನಿಯರ ಪೋಷಕರ ನಡುವೆ ಮಾತಿನ ಚಕಮಕಿ ನಡೆದಿದೆ. ಅಲ್ಲದೇ ಪ್ರಶ್ನೆ ಮಾಡಿದ ಪೋಷಕರ ಮೇಲೆ ಮತ್ತೋರ್ವ ಬಾಲಕಿ ಪೋಷಕರು ಹಲ್ಲೆ ಮಾಡಿದ್ದಾರೆ.
ವಿದ್ಯಾರ್ಥಿನಿಯ ಉಪಟಳ ಹೆಚ್ಚಾಗುತ್ತಿದ್ದಂತೆ ನೊಂದ ಬಾಲಕಿಯ ಪೋಷಕರು ಠಾಣೆ ಮೆಟ್ಟಿಲೇರಿದ್ದಾರೆ. ಬಾಣಸವಾಡಿ ಠಾಣಾ ವ್ಯಾಪ್ತಿಯ ಎಚ್‍ಆರ್‍ಬಿಆರ್ ಲೇಔಟ್‍ನಲ್ಲಿ ಈ ಘಟನೆ ನಡೆದಿದ್ದು, ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ 504, 323, ಹಾಗೂ 324 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply