ಮಳೆ ಹಾನಿಗೊಳಗಾದ ದ.ಕನ್ನಡ, ಉ. ಕನ್ನಡ, ಉಡುಪಿ ಜಿಲ್ಲೆಗೆ ಶೀಘ್ರವೇ ಪರಿಹಾರ ನೀಡಿ: ಸಿಎಂ ಸೂಚನೆ

ಬೆಂಗಳೂರು: ಕಳೆದೆರಡು ದಿನಗಳಿಂದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ಕೆಲವೆಡೆಗಳಲ್ಲಿ ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramiah) ಅವರು ಶೀಘ್ರವೇ ಪರಿಹಾರವನ್ನು ನಿಡುವಂತೆ ಸೂಚಿಸಿದ್ದಾರೆ.

ಈ ಸಂಬಂಧ ಸಿಎಂ ಆಫ್ ಕರ್ನಾಟಕದಿಂದ ಟ್ವೀಟ್ ಮಾಡಲಾಗಿದ್ದು, ಮೂರು ಜಿಲ್ಲೆಯ ಉತುವಾರಿ ಸಚಿವರುಗಳಿಗೆ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡುವಂತೆಯೂ ಸೂಚಿಸಲಾಗಿದೆ. ಇದನ್ನೂ ಓದಿ: ಇಂದಿನಿಂದ 4 ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆ

ಟ್ವೀಟ್‍ನಲ್ಲೇನಿದೆ..?: ದಕ್ಷಿಣ ಕನ್ನಡ (Dakshina Kannada0, ಉತ್ತರ ಕನ್ನಡ (Uttara Kannada) ಹಾಗೂ ಉಡುಪಿ (Udupi) ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದನನೂ ಓದಿ: ಭಾರೀ ಮಳೆಗೆ ಇಬ್ಬರು ಬಲಿ- ತಗ್ಗು ಪ್ರದೇಶಗಳಲ್ಲಿ ಕೃತಕ ಪ್ರವಾಹ ಸೃಷ್ಟಿ

ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಾಂಕಾಳ ವೈದ್ಯ ಅವರಿಗೆ ಸೂಚಿಸಲಾಗಿದೆ. ಮಳೆ ಹಾನಿ ಕುರಿತು ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆಯಲಾಗಿದ್ದು, ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳನ್ನು ತುರ್ತಾಗಿ ಸಜ್ಜುಗೊಳಿಸುವಂತೆ ಆದೇಶಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿಯೂ ಭಾರೀ ಮಳೆಯಾಗುತ್ತಿದೆ. ಉಡುಪಿಯಲ್ಲಿ ಭಾರೀ ಮಳೆಗೆ ಈಗಾಗಲೇ ಇಬ್ಬರು ಜೀವ ಕಳೆದುಕೊಂಡಿದ್ದಾರೆ. ಇನ್ನು ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕುಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬೆಂಗಳೂರು, ಮಳೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, bengaluru, rain, uttarakannada, dakshina kannada, udupi

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]