Exclusive -ಮೈಸೂರು ಮುಕ್ತ ವಿವಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ

ಬೆಂಗಳೂರು: ಕೊನೆಗೂ ಮೈಸೂರು ಮುಕ್ತ ವಿಶ್ವವಿದ್ಯಾಲಯದ ಬಿಕ್ಕಟ್ಟು ಶೀಘ್ರವೇ ಅಂತ್ಯವಾಗುವ ಸಮಯ ಹತ್ತಿರ ಬಂದಿದ್ದು ಪದವಿ ಮುಗಿಸಿ ಗೊಂದಲದಲ್ಲಿದ್ದ ವಿದ್ಯಾರ್ಥಿಗಳಿಗೂ ರಿಲೀಫ್ ಸಿಗುವ ಸುದ್ದಿ ಪ್ರಕಟವಾಗಿದೆ.

ಈ ಸಿಹಿಸುದ್ದಿಯನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವರಾದ ಪ್ರಕಾಶ್ ಜಾವಡೇಕರ್ ಅವರೇ ಪಬ್ಲಿಕ್ ಟಿವಿ ಜೊತೆಗೆ ಹಂಚಿಕೊಂಡಿದ್ದಾರೆ. ಹೊಸ ಮಾರ್ಗಸೂಚಿಗಳೊಂದಿಗೆ ಮೈಸೂರು ಮುಕ್ತ ವಿಶ್ವ ವಿದ್ಯಾಲಯ ಮತ್ತೆ ಆರಂಭವಾಗಲಿದ್ದು ತಪ್ಪು ಮಾಡಿದ ಅಧಿಕಾರಿಗಳಿಗೆ ಕಠಿಣ ಶಿಕ್ಷೆ ಕೊಟ್ಟು ಪದವಿ ಮುಗಿಸಿ ಗೊಂದಲದಲ್ಲಿರುವ ವಿದ್ಯಾರ್ಥಿಗಳಿಗೆ ಪದವಿ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಬ್ರಿಡ್ಜ್ ಕೋರ್ಸ್ ನಡೆಸಿ ಅದರ ಜೊತೆಗೆ ಒಂದು ಪರೀಕ್ಷೆ ನಡೆಸಲಾಗುತ್ತದೆ. ಆ ಮೂಲಕ ನಿಜವಾಗಿಯೂ ಪದವಿ ಮುಗಿಸಿದ್ದಾರೋ ಇಲ್ಲವೋ ಎನ್ನುವುದನ್ನು ಪರಿಶೀಲಿಸಿ ಅವರ ಪದವಿಯನ್ನು ನೀಡಲಾಗುತ್ತದೆ. ಮುಂದಿನ ವಾರ ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಈ ಎಲ್ಲ ವಿಚಾರದ ಬಗ್ಗೆ ಚರ್ಚೆ ನಡೆಸಿ  ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

https://youtu.be/CAKZXF9tw0w

Comments

Leave a Reply

Your email address will not be published. Required fields are marked *