‘Good Touch, Bad Touch’ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಕನಿಂದ ಕಿರುಕುಳ

ಮುಂಬೈ: ಇಂಗ್ಲಿಷ್ ಮೀಡಿಯಂ ಶಾಲೆಯ ದೈಹಿಕ ಶಿಕ್ಷಕನೊಬ್ಬ ವಿದ್ಯಾರ್ಥಿಗಳಿಗೆ ಗುಡ್ ಟಚ್, ಬ್ಯಾಡ್ ಟಚ್ ಬಗ್ಗೆ ಹೇಳಿಕೊಡುವುದಾಗಿ ನಾಲ್ವರು ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿರುವ ಘಟನೆ ಪುಣೆಯಲ್ಲಿ ನಡೆದಿದೆ.

ಹದಾಪ್ಸರ್ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ 40 ವರ್ಷದ ಶಿಕ್ಷಕನನ್ನು ಬಂಧಿಸಿದ್ದಾರೆ. ಬಂಧಿತನ ವಿರುದ್ಧ ಕಳೆದ 5 ತಿಂಗಳಿನಿಂದ 9ನೇ ತರಗತಿಯ ನಾಲ್ವರು ಬಾಲಕರನ್ನು ವಿವಿಧ ಸಂದರ್ಭದಲ್ಲಿ ಲೈಂಗಿಕವಾಗಿ ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಶಾಲೆಯಲ್ಲಿ ‘ಉತ್ತಮ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶ’ ಎಂಬ ಜಾಗೃತಿ ಅಭಿಯಾನವನ್ನು ನಡೆಸಲಾಗುತ್ತಿತ್ತು, ಈ ಕಾರ್ಯಕ್ರಮದಲ್ಲಿ ಆರೋಪಿಯೂ ಕೂಡ ಭಾಗಿಯಾಗಿದ್ದನು. ಶಿಕ್ಷಕನೇ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ದೂರು ನೀಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಬಂಧಿತ ಶಿಕ್ಷಕ ಕಳೆದ ಏಳು ವರ್ಷಗಳಿಂದ ಈ ಶಾಲೆಯಲ್ಲಿ ದೈಹಿಕ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದನು ಎಂದು ತಿಳಿದು ಬಂದಿದೆ. ಸದ್ಯಕ್ಕೆ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ ವಿದ್ಯಾರ್ಥಿಗಳಿಂದ ಹೇಳಿಕೆಯನ್ನು ಪಡೆಯಲಾಗಿದೆ. ಈಗಾಗಲೇ ವಿದ್ಯಾರ್ಥಿಗಳು ನೀಡಿದ ದೂರನ್ನು ಆಧಾರಿಸಿ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ. ಶೀಘ್ರವೇ ಆತನನ್ನು ಕೋರ್ಟ್ ಗೆ ಹಾಜರು ಪಡಿಸಲಾಗುತ್ತದೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಸುನಿಲ್ ತಂಬೆ ಹೇಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *