ವಿದ್ಯುತ್ ಕಂಬಕ್ಕೆ ಗುದ್ದಿ ಹೆದ್ದಾರಿಗೆ ಬಿದ್ದ ಗೂಡ್ಸ್ ಗಾಡಿ

ಹಾಸನ: ಚಾಲಕನ ನಿಯಂತ್ರಣ ತಪ್ಪಿದ  ಬೊಲೆರೋ ಗೂಡ್ಸ್ ಗಾಡಿ ಹೆದ್ದಾರಿಯ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಗುದ್ದಿ ರಸ್ತೆ ಮಧ್ಯೆ ಅಡ್ಡಲಾಗಿ ಬಿದ್ದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದಿದೆ.

ಅಕ್ಕಿ ತುಂಬಿಕೊಂಡು ಶಿವಮೊಗ್ಗದಿಂದ ಬೆಂಗಳೂರು ಕಡೆ ಸಾಗುತ್ತಿದ್ದ ಬೊಲೆರೋ ಗೂಡ್ಸ್ ಗಾಡಿ, ನಗರದ ಪಿಪಿ ವೃತ್ತದ ಸಮೀಪ ರಾಷ್ಟ್ರೀಯ ಹೆದ್ದಾರಿ 206ರ ಟಿಎಚ್ ರಸ್ತೆ ವಿಭಜಕದ ಮಧ್ಯೆ ಅಳವಡಿಸಿರುವ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಇದನ್ನೂ ಓದಿ: ಜಾರ್ಖಂಡ್‍ ಭೀಕರ ರಸ್ತೆ ಅಪಘಾತ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ

ಸದಾ ವಾಹನ ದಟ್ಟಣೆಯಿಂದ ಕೂಡಿರುವ ಹೆದ್ದಾರಿಯಲ್ಲಿ ಅನಿರೀಕ್ಷಿತವಾಗಿ ಸಂಭವಿಸಿದ ರಸ್ತೆ ಅಪಘಾತದ ವೇಳೆ ಯಾವುದೇ ವಾಹನಗಳು ಸಾಗದೆ ಇದ್ದಿದ್ದರಿಂದಾಗಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದೆ. ಮುಂಜಾನೆ ಅನಿರೀಕ್ಷಿತವಾಗಿ ಸಂಭವಿಸಿದ ಘಟನೆಯಿಂದಾಗಿ ಹೆದ್ದಾರಿ ಮೂಲಕ ಬೆಂಗಳೂರು ಮೈಸೂರು ಹಾಗೂ ಹಾಸನ ಸೇರಿದಂತೆ ಇತರೆ ಊರುಗಳಿಗೆ ಸಾಗುತ್ತಿದ್ದ ಪ್ರಯಾಣಿಕರು ಕೆಲ ಸಮಯ ತೊಂದರೆ ಅನುಭವಿಸುವಂತಾಯಿತು. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ತರಕಾರಿ, ಹಣ್ಣುಗಳನ್ನು ಲಂಚವಾಗಿ ಪಡೆಯುತ್ತಿದ್ದ ಅಧಿಕಾರಿಗಳು!

Comments

Leave a Reply

Your email address will not be published. Required fields are marked *