ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವಿವಿಧ ವರ್ಗಗಳ ನೌಕರರು ಇಂದು ನಗರದ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿದರು.
ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ್ದ 62 ವಿವಿಧ ವರ್ಗಗಳ ಸಾವಿರಾರು ನೌಕರರು ಅಹಿಂಸಾ ಸಂಘಟನೆ(ಅಲ್ಪ ಸಂಖ್ಯಾತ, ಹಿಂದುಳಿದ, ಸಾಮಾನ್ಯ ವರ್ಗ) ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ರ‍್ಯಾಲಿಯಲ್ಲಿ ಭಾಗವಹಿಸಿದ್ದರು.

ಇಂದು ಬೆಳಗ್ಗೆ ಫ್ರೀಡಂ ಪಾರ್ಕ್ ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಅರಮನೆ ಮೈದಾನದ ವರೆಗೂ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೌಕರರು ಮುಂಬಡ್ತಿ ವಿಚಾರವಾಗಿ ಸುಪ್ರೀಂಕೋರ್ಟ್ ನೀಡಿರುವ ಆದೇಶ ಜಾರಿ ಮಾಡುವಂತೆ ಎಂದು ಒತ್ತಾಯ ಮಾಡಿದರು. ಅಲ್ಲದೇ ಸುಪ್ರೀಂ ಆದೇಶವಿದ್ದರೂ ರಾಜ್ಯ ಸರ್ಕಾರ ಮುಂಬಡ್ತಿಯನ್ನು ನೀಡಲು ಹಿಂದೇಟು ಹಾಕುತ್ತಿದೆ. ರಾಜ್ಯ ಸರ್ಕಾರದ ಶೇ.82 ರಷ್ಟು ನೌಕರರಿಗೆ ಮುಂಬಡ್ತಿ ನೀಡಬೇಕು ಆಗ್ರಹಿಸಿದರು.
ಅಲ್ಲದೇ ರಾಜ್ಯ ಸರ್ಕಾರವು ಸುಪ್ರೀಂ ಆದೇಶಕ್ಕೆ ತದ್ವಿರುದ್ಧವಾಗಿ ಕಾನೂನು ಜಾರಿಗೆ ಮಾಡಲು ನಿರ್ಧರಿಸಿದೆ. ಆದರಿಂದಲೇ ಈ ಕಾಯ್ದೆಯನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯಪಾಲರಿಗೆ ಕಡತ ರವಾನಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.




Leave a Reply