ನನ್ನನ್ನು ತಿಹಾರ್ ಜೈಲಿಗಾದ್ರೂ ಹಾಕಲಿ, ಪರಪ್ಪನ ಅಗ್ರಹಾರ ಜೈಲಿಗಾದ್ರೂ ಹಾಕಲಿ ಹೆದರಲ್ಲ: ಡಿಕೆಶಿ

DK SHIVAKUMAR

ಶಿವಮೊಗ್ಗ: ನನ್ನನ್ನು ತಿಹಾರ್ ಜೈಲಿಗಾದ್ರೂ ಹಾಕಲಿ, ಪರಪ್ಪನ ಆಗ್ರಹಾರ ಜೈಲಿಗಾದ್ರೂ ಹಾಕಲಿ ನಾನು ಹೆದರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಚಿವ ಡಾ. ಸಿ.ಎನ್.ಅಶ್ವಥ್​ ನಾರಾಯಣ ಅವರಿ​ಗೆ ತಿರುಗೇಟು ನೀಡಿದ್ದಾರೆ.

ಶಿವಮೊಗ್ಗದ ಬಿಜೆಪಿ ಸರ್ಕಾರದ ವಿರುದ್ದ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಚಿವ ಅಶ್ವಥ್‌ ನಾರಾಯಣ ಅವರು ನನ್ನ ವಿರುದ್ದ ಮಾತನಾಡಿದ್ದಾರೆ. ನನಗೆ ಜೈಲೇ ಶಾಶ್ವತ ಎಂದಿದ್ದಾರೆ. ಆದರೆ ನನ್ನನ್ನು ಯಾವ ಜೈಲಿಗಾದ್ರೂ ಹಾಕಲಿ, ನಾವು ಅವರಿಗೆ ಆಜ್ಞೆ ಮಾಡುವುದಕ್ಕೆ ಆಗಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಹಗರಣಗಳು ನಡೆದಿಲ್ವಾ: S.T.ಸೋಮಶೇಖರ್

ರಾಜ್ಯದಲ್ಲಿ ಪರೀಕ್ಷೆ, ನೇಮಕಾತಿ ಎಲ್ಲದರಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿದೆ. ಸರ್ಟಿಫಿಕೇಟ್​ ನೀಡೋದು, ಪಾಸ್ ಮಾಡೋದು ಇವೆಲ್ಲದರಲ್ಲಿಯೂ ದಂಧೆಯಾಗಿದೆ ಅಂತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯ ಸರ್ಕಾರ ಹಗರಣಗಳನ್ನು ಮುಚ್ಚಿ ಹಾಕುವಂತಹ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಅವರು ಮಾಜಿ ಸಚಿವ ಈಶ್ವರಪ್ಪ ಅಪರಾಧಿಯಲ್ಲ ಎಂದು ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಹಗರಣವನ್ನು ಮುಚ್ಚಿ ಹಾಕಲು ಸಣ್ಣಪುಟ್ಟ ಅಧಿಕಾರಿಗಳ ಮೇಲೆ ಆ್ಯಕ್ಷನ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್​ ಪ್ರತಿಭಟನೆ ಹಾಗೂ ಪಾದಯಾತ್ರೆ ಚುನಾವಣಾ ಗಿಮಿಕ್​ ಎಂದು ಜರಿದಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಈ ಹಿಂದೆ ಎಲ್​.ಕೆ.ಅಡ್ವಾಣಿ, ಯಡಿಯೂರಪ್ಪ ಅವರು ಮಾಡಿದ ಯಾತ್ರೆಗಳೆಲ್ಲಾ ಗಿಮಿಕ್ ಆಗಿದ್ದವಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಸಿದ್ದು ಆಪ್ತರ ಮೇಲೆ ಅನುಮಾನ ಪಟ್ಟಿದ್ದಾರಾ ಡಿಕೆಶಿ?

ನಮ್ಮ ದೇಶದಲ್ಲಿ ಹಲವು ಧರ್ಮಗಳಿವೆ. ಅವರವರ ಧರ್ಮ ಆಚರಣೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ, ಕಾನೂನು ಪಾಲಿಸಲಿ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಈ ಬಗ್ಗೆ ಹೊಸ ಕಾನೂನು ಮಾಡಿಸುವ ಬದಲು ಇರುವ ಕಾನೂನನ್ನು ಕಾಪಾಡಲಿ ಎಂದು ಹೇಳಿದ್ದಾರೆ.

ಈ ವೇಳೆ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹಾಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್, ಭದ್ರಾವತಿ ಶಾಸಕ ಸಂಗಮೇಶ್, ಜಿಲ್ಲಾಧ್ಯಕ್ಷ ಸುಂದರೇಶ್ ಹಾಜರಿದ್ದರು.

Comments

Leave a Reply

Your email address will not be published. Required fields are marked *