2,000 ರೂ. ಮುಖಬೆಲೆಯ ನೋಟುಗಳನ್ನ ಬ್ಯಾನ್ ಮಾಡಿ – BJP ಸಂಸದ ಸುಶೀಲ್ ಮೋದಿ ಆಗ್ರಹ

ನವದೆಹಲಿ: 2000 ರೂ. ಮುಖಬೆಲೆಯ ನೋಟುಗಳನ್ನು (2000 Indian Currency) ಹಿಂಪಡೆಯುವಂತೆ ಬಿಜೆಪಿ (BJP) ಸಂಸದ ಸುಶೀಲ್ ಮೋದಿ (Sushil Modi) ಸಂಸತ್ತಿನಲ್ಲಿ ಆಗ್ರಹಿಸಿದ್ದರೆ.

ರಾಜ್ಯಸಭೆಯ ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, 2000 ರೂ. ಮುಖಬೆಲೆಯ ನೋಟುಗಳು ದೇಶದ ಬಹುತೇಕ ಎಟಿಎಂಗಳಿಂದ ಕಣ್ಮರೆಯಾಗಿವೆ. ಸದ್ಯದಲ್ಲೇ ಅವು ಚಲಾವಣೆ ಕಳೆದುಕೊಳ್ಳಲಿವೆ ಎಂಬ ವದಂತಿಯೂ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾ, ಶ್ರೀಲಂಕಾ, ಮಾರಿಷಸ್‌ ಜೊತೆ ಕ್ಲಿಕ್‌ – ಮತ್ತಷ್ಟು ದೇಶಗಳೊಂದಿಗೆ ರುಪಿ ವ್ಯವಹಾರಕ್ಕೆ ಮುಂದಾದ ಭಾರತ

ಭಾರತೀಯ ರಿಸರ್ವ್ ಬ್ಯಾಂಕ್ (RBI) ಕಳೆದ 3 ವರ್ಷಗಳಿಂದ 2000 ರೂ. ಮುಖಬೆಲೆಯ ನೋಟುಗಳನ್ನು ಮುದ್ರಿಸೋದನ್ನೇ ನಿಲ್ಲಿಸಿದೆ. ಈ ನೋಟುಗಳು ಭಯೋತ್ಪಾದಕ ನಿಧಿ (Terror Funding), ಮಾದಕವಸ್ತು ಕಳ್ಳಸಾಗಣೆ ಮತ್ತು ಕಪ್ಪುಹಣಕ್ಕೆ ಬಳಕೆಯಾಗುತ್ತಿದೆ ಎಂಬ ಮಾಹಿತಿ ಇದೆ. ಈ ಎಲ್ಲ ವಿಷಯಗಳ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: 

ಯುಎಸ್ (US), ಚೀನಾ, ಜರ್ಮನಿ, ಜಪಾನ್‌ನಂತಹ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಆರ್ಥಿಕತೆ ನೋಡಿದ್ರೆ, ಅವರ ಬಳಿ 100ಕ್ಕಿಂತ ಹೆಚ್ಚಿನ ಮುಖಬೆಲೆಯ ಕರೆನ್ಸಿಗಳಿಲ್ಲ. ಆದ್ದರಿಂದ ಕೇಂದ್ರ ಸರ್ಕಾರ ಯೋಚಿಸಿ 2000 ರೂ. ಮುಖಬೆಲೆಯ ನೋಟುಗಳನ್ನು ಹಂತ ಹಂತವಾಗಿ ನಿಷೇಧಿಸಬೇಕು. ಕಪ್ಪುಹಣಕ್ಕೆ ಕಡಿವಾಣ ಹಾಕಲು ಈ ಮುಖಬೆಲೆ ನೋಟು ಚಲಾವಣೆಯನ್ನು ನಿಲ್ಲಿಸಬೇಕು. ನೋಟು ವಿನಿಮಯ ಮಾಡಿಕೊಳ್ಳಲು ಜನರಿಗೆ 2 ವರ್ಷ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *