ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಮೇಲೆ ಸದಸ್ಯನಿಂದ ಹಲ್ಲೆಗೆ ಯತ್ನ

ಮಂಡ್ಯ: ಅಕ್ರಮವಾಗಿ ನಡೆಸುತ್ತಿದ್ದ ಕೋಳಿ ಹಾಗೂ ಮಾಂಸದಂಗಡಿಗಳ ತೆರವಿಗೆ ಮುಂದಾಗಿದ್ದ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಮೇಲೆ ಗ್ರಾಮ ಪಂಚಾಯತಿ ಸದಸ್ಯ ಹಲ್ಲೆ ಮಾಡಲು ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿಂಡಿಗನವಿಲೆಯಲ್ಲಿ ನಡೆದಿದೆ.

ಪರವಾನಗಿ ಇಲ್ಲದೆ ಕೋಳಿ ಹಾಗೂ ಮಾಂಸದಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡಲಾಗುತ್ತಿತ್ತು. ಇದನ್ನು ಗಮನಿಸಿದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹರೀಶ್‍ಗೌಡ ಅಂಗಡಿಗಳ ತೆರವಿಗೆ ಮುಂದಾಗಿದ್ದಾರೆ. ಈ ವೇಳೆ ಮಂಗರವಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ಅಂಗಡಿಗಳನ್ನು ತೆರವು ಮಾಡದಂತೆ ತಡೆಯುತ್ತಾರೆ.

ನಂತರ ಬಿಂಡಿಗನವಿಲೆ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಆಗಮಿಸಿ, ಹರೀಶ್‍ಗೌಡರ ಮೇಲೆ ಪ್ರಕಾಶ್ ವಾಗ್ದಾಳಿ ನಡೆಸಿದ್ದಾರೆ. ನಂತರ ಮಾತಿಗೆ ಮಾತು ಬೆಳೆದು ಪ್ರಕಾಶ್ ಹರೀಶ್‍ಗೌಡರ ಮೇಲೆ ಹಲ್ಲೆಗೆ ಮುಂದಾಗುತ್ತಾರೆ. ನಂತರ ಸ್ಥಳದಲ್ಲಿದ್ದವರು ಪ್ರಕಾಶ್ ಅವರನ್ನು ತಡೆದು, ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಈ ಕುರಿತು ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *