ಗುಜರಾತ್‌ನಲ್ಲಿ ಪ್ರವಾಹ ಪರಿಸ್ಥಿತಿ – 9 ಜನರಿದ್ದ ಇಕೋ ಕಾರು ನೀರುಪಾಲು, ನಾಲ್ವರು ಸಾವು

ಗಾಂಧೀನಗರ: 9 ಜನರಿದ್ದ ಇಕೋ ಕಾರು ನೀರುಪಾಲಾಗಿ ನಾಲ್ವರು ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿರುವ ಘಟನೆ ಗುಜರಾತ್‌ನ ಬೋಟಾಡ್ (Botad) ಜಿಲ್ಲೆಯಲ್ಲಿ ನಡೆದಿದೆ. ಭಾರೀ ಮಳೆಯಿಂದಾಗಿ ಗುಜರಾತ್‌ನಲ್ಲಿ (Gujarat) ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಈ ಅವಘಡ ಸಂಭವಿಸಿದೆ.

ಈ ಕುರಿತು ಎನ್‌ಡಿಆರ್‌ಎಫ್ (NDRF) ಅಧಿಕಾರಿ ವಿನಯ್ ಕುಮಾರ್ ಭಾಟಿ ಮಾತನಾಡಿ, ಮಂಗಳವಾರ ಬೆಳಗಿನ ಜಾವ ಈ ಅವಘಡ ಸಂಭವಿಸಿದ್ದು, ನಾಲ್ವರ ಶವ ಪತ್ತೆಯಾಗಿದೆ. ಇನ್ನೂ ಮೂವರಿಗಾಗಿ ಶೋಧಕಾರ್ಯ ಮುಂದುವರೆದಿದೆ.ಇದನ್ನೂ ಓದಿ: ಕೊಡಗಿನಲ್ಲಿ BSNL ಸೇವೆ ಸರಿಪಡಿಸಲು ಕೇಂದ್ರ ಸಚಿವರಿಗೆ ಯದುವೀರ್‌‌ ಒಡೆಯರ್‌ ಮನವಿ

ನಮ್ಮ ತಂಡವನ್ನು ರಾಜ್‌ಕೋಟ್‌ನಲ್ಲಿ ಕೆಲಸಕ್ಕೆ ನಿಯೋಜಿಸಲಾಗಿತ್ತು. ಆದರೆ ಬೋಟಾಡ್‌ನಲ್ಲಿ ಕೆಲವು ಜನ ಸಿಲುಕಿಕೊಂಡಿರುವ ಮಾಹಿತಿ ಸಿಕ್ಕ ಬೆನ್ನಲ್ಲೇ ನಾವು ಇಲ್ಲಿಗೆ ಬಂದೆವು. ಆದರೆ ಈ ಗ್ರಾಮಕ್ಕೆ ತಲುಪೋದು ಸುಲಭವಾಗಿರಲಿಲ್ಲ. ಸದ್ಯ ಸ್ಥಳೀಯ ಅಧಿಕಾರಿಗಳ ಬೆಂಬಲದೊಂದಿಗೆ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದರು.

ಗುಜರಾತ್‌ನಲ್ಲಿ ಈಗಾಗಲೇ ಮಳೆಯಿಂದಾಗಿ 18 ಜನ ಸಾವನ್ನಪ್ಪಿದ್ದಾರೆ. ಹೀಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದೆ. ನಿರಂತರ ಮಳೆಯಿಂದಾಗಿ ನೀರಿನ ಮಟ್ಟದಲ್ಲಿ ಗಮನಾರ್ಹ ಏರಿಕೆಯಾದ ಹಿನ್ನೆಲೆ ಜಿಲ್ಲೆಯ ಖಂಬದಾ ಆಣೆಕಟ್ಟಿನ ಗೇಟ್‌ಗಳನ್ನು ತೆರೆಯಲಾಗಿದೆ.ಇದನ್ನೂ ಓದಿ: ದಾಳಿ ಮಾಡಿ ಇಸ್ರೇಲ್‌ ದೊಡ್ಡ ತಪ್ಪು ಮಾಡಿದೆ, ನಾವು ಶರಣಾಗಲ್ಲ: ಟ್ರಂಪ್‌ಗೆ ಖಮೇನಿ ವಾರ್ನಿಂಗ್‌