ಡಿ.9, 14ಕ್ಕೆ ಗುಜರಾತ್ ಚುನಾವಣೆ, 18ಕ್ಕೆ ಫಲಿತಾಂಶ

ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. 2 ಹಂತದಲ್ಲಿ ಚುನಾವಣೆ ನಡೆಯಲಿದೆ.

ದೆಹಲಿಯ ಕೇಂದ್ರ ಚುನಾವಣಾ ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯುಕ್ತ ಅಚಲ್ ಕುಮಾರ್ ಜ್ಯೋತಿ, ಮೊದಲ ಹಂತದ ಮತದಾನ ಡಿಸೆಂಬರ್ 9ರಂದು ನಡೆದರೆ, 2ನೇ ಹಂತದ ಚುನಾವಣೆ ಡಿಸೆಂಬರ್ 14ರಂದು ನಡೆಯಲಿದೆ ಎಂದು ತಿಳಿಸಿದರು.

ಡಿಸೆಂಬರ್ 18ರಂದು ಮತ ಎಣಿಕೆ ನಡೆಯಲಿದೆ. ಒಟ್ಟು 50128 ಮತದಾನ ಕೇಂದ್ರಗಳಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಚುನಾವಣೆಯಲ್ಲಿ ಮತ ದೃಢೀಕರಿಸುವ ವಿವಿಪ್ಯಾಟ್ ಯಂತ್ರಗಳನ್ನು ಬಳಸಲಾಗುವುದು ಎಂದರು.

ಗುಜರಾತ್ ನ ಒಟ್ಟು 182 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಚುನಾವಣೆಗೆ ಪ್ರತಿ ಅಭ್ಯರ್ಥಿಗೆ ವೆಚ್ಚದ ಮಿತಿಯನ್ನು 28 ಲಕ್ಷ ರೂ. ಎಂದು ನಿಗದಿಗೊಳಿಸಲಾಗಿದೆ ಎಂದರು.

 

Comments

Leave a Reply

Your email address will not be published. Required fields are marked *