ಗಲ್ಫ್ ರಾಷ್ಟ್ರಗಳು ಪ್ರವಾದಿ ವಿವಾದದಲ್ಲಿ ಭಾರತದ ನಿಲುವನ್ನು ಅರ್ಥಮಾಡಿಕೊಂಡಿವೆ: ವಿದೇಶಾಂಗ ಕಾರ್ಯದರ್ಶಿ

ನವದೆಹಲಿ: ಪಿಎಂ ನರೇಂದ್ರ ಮೋದಿ ಅವರ ಯುಎಇ ಭೇಟಿಗೆ ಮುನ್ನ ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ಅವರು ಪ್ರವಾದಿಯ ವಿಷಯದಲ್ಲಿ ಭಾರತದ ನಿಲುವಿನ ಬಗ್ಗೆ ಗಲ್ಫ್ ರಾಷ್ಟ್ರಗಳಿಗೆ ತಿಳಿವಳಿಕೆ ಇದೆ ಎಂದು ತಿಳಿಸಿದರು.

ವಿನಯ್ ಮೋಹನ್ ಕ್ವಾತ್ರಾ ಅವರು ಶುಕ್ರವಾರ ಪ್ರವಾದಿ ಮೊಹಮ್ಮದ್ ವಿವಾದಾತ್ಮಕ ಹೇಳಿಕೆಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಭಾರತವು ತನ್ನ ನಿಲುವನ್ನು ವಿವಿಧ ವೇದಿಕೆಗಳಲ್ಲಿ ತಿಳಿಸಿದೆ. ಬಹುತೇಕ ಎಲ್ಲ ಗಲ್ಫ್ ರಾಷ್ಟ್ರಗಳು ಭಾರತದ ನಿಲುವಿನ ಬಗ್ಗೆ ತಿಳಿವಳಿಕೆಯನ್ನು ಹೊಂದಿವೆ. ನಾವು ವಿವಿಧ ವೇದಿಕೆಗಳಲ್ಲಿ ನಮ್ಮ ನಿಲುವನ್ನು ತಿಳಿಸಿದ್ದೇವೆ. ಅದನ್ನು ಇನ್ನೂ ಮುಂದೆಯೂ ಮಾತನಾಡುವುದು ಸರಿಯಲ್ಲ ಎಂದು ನಾನು ಭಾವಿಸುತ್ತೇನೆ ಎಂದರು. ಇದನ್ನೂ ಓದಿ: ನಾನು ಕಲಿತ ಶಾಲೆಯನ್ನ ದತ್ತು ಪಡೆದು ಮಾದರಿ ಶಾಲೆ ಮಾಡುತ್ತೇನೆ: ಪ್ರಮೋದ್ ಮುತಾಲಿಕ್ 

ಮೋದಿ ಅವರ ಜರ್ಮನಿ ಮತ್ತು ಯುಎಇ ಭೇಟಿಯ ಕುರಿತು ವಿಶೇಷ ಮಾಹಿತಿ ನೀಡುವ ಸಂದರ್ಭದಲ್ಲಿ ಅವರು ಈ ಹೇಳಿಕೆಗಳನ್ನು ನೀಡಿದರು. ನಂತರ ಮೋದಿ ಅವರ ಮೊದಲ ಯುಎಇ ಭೇಟಿಯ ಕುರಿತು ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ಯುಎಇ ಭೇಟಿಯು ಎರಡು ಪ್ರಮುಖ ವಿಷಯಗಳ ಮೇಲೆ ಕೇಂದ್ರೀಕರಿಸುತ್ತದೆ. ಮೊದಲು ಯುಎಇ ಮಾಜಿ ಅಧ್ಯಕ್ಷ ಮತ್ತು ಅಬುಧಾಬಿ ಆಡಳಿತಗಾರ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ಅವರ ನಿಧನಕ್ಕೆ ಸಂತಾಪ ಸೂಚಿಸಲು. ಎರಡನೆಯದು ಯುಎಇ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಅಭಿನಂದಿಸುವುದು ಎಂದು ವಿವರಿಸಿದರು.

ಯುಎಇಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರನ್ನು ಪ್ರಧಾನಿಯವರ ಮೊದಲ ಭೇಟಿ ಇದಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಪಾಸ್‍ಪೋರ್ಟ್ ಸುಟ್ಟುಹಾಕಿದ್ದಕ್ಕೆ ಪತ್ನಿ ಕತ್ತು ಸೀಳಿದ – ಆಕೆ ಕೈ ಹಿಡಿದು ಇಷ್ಟವಾದ ಹಾಡು ನುಡಿಸಿದ ಪಾಗಲ್ 

ಜೂನ್ 26-27 ರಂದು ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಭಾಗವಹಿಸಲು ಮೋದಿ ಜರ್ಮನಿಗೆ ಭೇಟಿ ನೀಡಲಿದ್ದಾರೆ. ಜರ್ಮನಿಯಲ್ಲಿ ಜಿ7 ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ, ಮೋದಿ ಜೂನ್ 28 ರಂದು ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ಗೆ ಪ್ರಯಾಣಿಸಲಿದ್ದಾರೆ.

Live Tv

Comments

Leave a Reply

Your email address will not be published. Required fields are marked *