ಇದು ‘ಕೊಲೆಗೆಡುಕ ಸರ್ಕಾರ’ – ಹೆಚ್‍ಡಿಕೆ ಕಿಡಿ

KUMARASWAMY

ಬೆಂಗಳೂರು: ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ‘ಕೊಲೆಗೆಡುಕ ಸರ್ಕಾರ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡುವ ಮೂಲಕ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ. ಈ ಘಟನೆಯನ್ನು ಸರ್ಕಾರ ತಡೆಯಬಹುದಿತ್ತು. ಮೊದಲೇ ಆ ಕುಟುಂಬಕ್ಕೆ ಪರಿಹಾರ, ಅನುಕಂಪದ ಉದ್ಯೋಗ ನೀಡಿದ್ದರೆ, ಮೂರು ಅಮೂಲ್ಯ ಜೀವಗಳು ಉಳಿಯುತ್ತಿದ್ದವು. ಇದು ‘ಕೊಲೆಗೆಡುಕ ಸರ್ಕಾರ’ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಆರ್ಥಿಕ ಸಂಕಷ್ಟದಿಂದ ಮನನೊಂದು KSRTC ನೌಕರ ವಿಷ ಸೇವಿಸಿ ಆತ್ಮಹತ್ಯೆ

ಎಲ್ಲಾ ದುಂದು ವೆಚ್ಚ, ಲೂಟಿ ನಿಲ್ಲಿಸಿ ಸರ್ಕಾರ ಇಂಥವರ ನೆರವಿಗೆ ಧಾವಿಸಬೇಕಿತ್ತು. ಇಂತಹ ಪ್ರಕರಣಗಳ ಇತ್ಯರ್ಥಕ್ಕೆ ಮೊದಲೇ ಆದ್ಯತೆ ನೀಡಬೇಕಿತ್ತು. ರಾಜ್ಯ ಸರ್ಕಾರ ಪೂರ್ಣ ವಿಫಲವಾಗಿದೆ ಹಾಗೂ ಅಧಿಕಾರಿಗಳ ಹೊಣೆಗೇಡಿತನ ಎದ್ದು ಕಾಣುತ್ತದೆ. ಕೂಡಲೇ ಸಂಬಂಧಪಟ್ಟ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ:  ಗೋಕಾಕ್ ಫಾಲ್ಸ್ ಬಳಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ 140 ಅಡಿ ಕಂದಕಕ್ಕೆ ಬಿದ್ದವ ಪವಾಡ ಸದೃಶ್ಯ ರೀತಿ ಪಾರು

ಸ್ವತಃ ಮುಖ್ಯಮಂತ್ರಿಗಳೇ ಈ ಬಗ್ಗೆ ಗಮನ ಹರಿಸಿ ಕೊರೊನಾ ಸೋಂಕಿಗೆ ಬಲಿಯಾದ ಸಾರಿಗೆ ನೌಕರರ ಕುಟುಂಬಗಳಿಗೆ ನೆರವಾಗಿ, ಮುಂದಿನ ಅನಾಹುತಗಳನ್ನು ತಪ್ಪಿಸಬೇಕು ಎಂದು ನಾನು ಬೊಮ್ಮಾಯಿ ಅವರನ್ನು ಒತ್ತಾಯ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 200 ಕೋಟಿ ಜೀವನಾಂಶ ರಿಜೆಕ್ಟ್ ಮಾಡಿದ ಸಮಂತಾ

 

Comments

Leave a Reply

Your email address will not be published. Required fields are marked *