ಹಾನಗಲ್ ಉಪಚುನಾವಣೆ- ಟಿಕೆಟ್‍ಗಾಗಿ ಬಿಜೆಪಿ, ಕಾಂಗ್ರೆಸ್ ಆಕಾಂಕ್ಷಿಗಳು ತೆರೆಮರೆಯ ಕಸರತ್ತು

ಹಾವೇರಿ: ಮಾಜಿ ಸಚಿವ ಹಾಗೂ ಶಾಸಕ ಸಿ.ಎಂ.ಉದಾಸಿ ನಿಧನದಿಂದ ತೆರವಾಗಿದ್ದ ಹಾನಗಲ್ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗಿದೆ. ಇದರ ಬೆನ್ನಲ್ಲೇ ಇದೀಗ ಎರಡೂ ರಾಷ್ಟ್ರೀಯ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳು ತೆರೆಮರೆಯ ಪ್ರಯತ್ನ ನಡೆದಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ. ಟಿಕೆಟ್‍ಗಾಗಿ ತೆರೆಮರೆಯಲ್ಲೇ ಕಸರತ್ತು ನಡೆಸಿದ್ದಾರೆ. ಕಾಂಗ್ರೆಸ್ ನಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಮಾಜಿ ಸಚಿವ ಮನೋಹರ ತಹಶೀಲ್ದಾರ, ಪ್ರಕಾಶಗೌಡ ಪಾಟೀಲ್, ಸೋಮಶೇಖರ ಕೋತಂಬ್ರಿ, ಬಿ.ಕೆ.ಮೋಹನಕುಮಾರ್ ಸೇರಿದಂತೆ ಹಲವರು ಟಿಕೆಟ್‍ಗಾಗಿ ಕಸರತ್ತು ನಡೆಸಿದ್ದಾರೆ. ಇದನ್ನೂ ಓದಿ: ಅವಧಿಗೂ ಮುನ್ನವೇ ಪೂರ್ಣಗೊಳ್ಳಲಿದೆ ಏಷ್ಯಾದ ಉದ್ದ ಸುರಂಗ ರಸ್ತೆ

ಬಿಜೆಪಿ ಪಕ್ಷದಲ್ಲಿಯೂ ಸಂಸದ ಶಿವಕುಮಾರ ಉದಾಸಿ ಪತ್ನಿ ರೇವತಿ ಉದಾಸಿ, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಕೃಷ್ಣ ಈಳಿಗೇರ, ಮಾಜಿ ಶಾಸಕ ಶಿವರಾಜ ಸಜ್ಜನ ಸೇರಿದಂತೆ ಹಲವರು ಟಿಕೆಟ್ ಗಾಗಿ ತಮ್ಮ ನಾಯಕರ ಮೂಲಕ ಕಸರತ್ತು ನಡೆಸಿದ್ದಾರೆ. ಈಗಾಗಲೇ ಜೆಡಿಎಸ್ ತಮ್ಮ ಅಭ್ಯರ್ಥಿಯಾಗಿ ನಿಯಾಜ್ ಶೇಖ್ ಹೆಸರು ಘೋಷಣೆ ಮಾಡಿದೆ. ಆದರೆ ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಿಂದ ಯಾರಿಗೆ ಟಿಕೆಟ್ ಸಿಗುತ್ತೆ ಎಂಬುದನ್ನು ಕಾದುನೋಡಬೇಕಾಗಿದೆ.

Comments

Leave a Reply

Your email address will not be published. Required fields are marked *