ಹಾವೇರಿ: ಗುದ್ದಲಿಯಿಂದ ಹೊಡೆದು ವಿಕಲಚೇತನನ ಹತ್ಯೆ ಮಾಡಿದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಶಿಡೇನೂರು ಗ್ರಾಮದಲ್ಲಿ ನಡೆದಿದೆ.
ಹತ್ಯೆಯಾದ ವಿಕಲಚೇತನರನ್ನು 62 ವರ್ಷದ ಶಿವಮೂರ್ತಯ್ಯ ಕೆಂಬಾವಿಮಠ ಎಂದು ಗುರುತಿಸಲಾಗಿದೆ. ಇವರನ್ನು ಮನೆಯಲ್ಲಿಯೇ ಶಾಂತನಗೌಡ ತೆವರಿ ಎಂಬಾತ ಕೊಲೆ ಮಾಡಿದ್ದಾನೆ. ಬೆಳಗ್ಗಿನ ಜಾವ ಮನೆಯ ಬಾಗಿಲು ಮುರಿದು ಹತ್ಯೆ ಮಾಡಿದ್ದಾನೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಆರೋಪಿ ಶಾಂತನಗೌಡನನ್ನು ಸದ್ಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ. ಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply