ಹಾವೇರಿ: ರಾಜ್ಯದ ಎರಡು ಕ್ಷೇತ್ರಗಳಾದ ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ನಿನ್ನೆ ಹಾನಗಲ್ ಮತ್ತು ಸಿಂದಗಿ ಕ್ಷೇತ್ರದಲ್ಲಿ ಬಹಿರಂಗ ಪ್ರಚಾರ ಸಂಜೆ ಮುಕ್ತಾಯವಾಗಿದೆ. ಇಂದು ಹಾವೇರಿ ಜಿಲ್ಲೆ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕರ್ಯಕರ್ತರು ಮನೆ ಮನೆ ತೆರಳಿ ಪ್ರಚಾರ ನಡೆಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ್ ಕ್ಷೇತ್ರ ವ್ಯಾಪ್ತಿಯ ಶೀಗಿಹಳ್ಳಿ, ಸಿಂಗಾಪುರ, ಜಕ್ಕನಾಯಕನಕೊಪ್ಪ ಗ್ರಾಮಗಳಲ್ಲಿ ಮನೆ ಮನೆ ತೆರಳಿ ಪ್ರಚಾರ ನಡೆಸಿದರು. ಮನೆ ಮನೆ ಪ್ರಚಾರದ ಜೊತೆಗೆ ಪಕ್ಷದ ಮುಖಂಡರ ಮನೆ, ಗ್ರಾಮದಲ್ಲಿನ ದೇವಸ್ಥಾನಗಳಿಗೆ ಭೇಟಿ ನೀಡಿದರು. ಗ್ರಾಮದ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದು ಪ್ರಚಾರ ಮುಂದುವರಿಸಿದರು. ಇದನ್ನೂ ಓದಿ: ಹಾನಗಲ್‍ನಲ್ಲಿ ಹರೀತಿದ್ಯಾ ಹಣದ ಹೊಳೆ..? – ಸಿದ್ದರಾಮಯ್ಯ, ಡಿಕೆಶಿ ಬಳಿಕ ಹೆಚ್‍ಡಿಕೆ ಆರೋಪ

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಕೂಡ ಮನೆ ಮನೆ ಪ್ರಚಾರ ನಡೆಸಿದ್ದಾರೆ. ಹಾನಗಲ್ ಕ್ಷೇತ್ರ ವ್ಯಾಪ್ತಿಯ ಆಡೂರು ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿ ಮತಯಾಚನೆ ಮಾಡಿದರು. ನಿನ್ನೆ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದರಿಂದ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಯ ಕಾರ್ಯಕರ್ತರು ಸುತ್ತಮುತ್ತಲಿನ ಗ್ರಾಮಗಳಿಗೆ ತೆರಳಿ ಪ್ರಚಾರದ ಜೊತೆಗೆ ಮುಖಂಡರ ಮನೆಗೆ ಭೇಟಿ ನೀಡಿ ಮುಖಂಡರ ಜೊತೆ ಚರ್ಚೆ ನಡೆಸಿದ್ದಾರೆ. ಮತದಾನಕ್ಕೆ ಒಂದು ದಿನ ಬಾಕಿ ಉಳಿದಿದ್ದು, ಮತಗಳ ಲೆಕ್ಕಾಚಾರದ ಮೇಲೆ ರಣತಂತ್ರವನ್ನು ಅಭ್ಯರ್ಥಿಗಳು ರೂಪಿಸುತ್ತಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಿನಲ್ಲಿ ಯಂಕ, ನಾಣಿ, ಸೀನ ಅನ್ನೋ ಎಂಪಿಗಳಿದ್ದಾರೆ ಅಷ್ಟೇ: ಬಿಎಸ್‍ವೈ

Leave a Reply