ಮುಂಬೈ: ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಶ್ರೀಲಂಕಾ ಪ್ರವಾಸ ತೆರಳುವುದಕ್ಕೂ ನ್ನ ಇದೀಗ ತಮ್ಮ ನೂತನ ಕೇಶ ವಿನ್ಯಾಸದ ಮೂಲಕ ಗಮನ ಸೆಳೆದಿದ್ದಾರೆ.
ಹೌದು, ಕಳೆದ ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಪಾಂಡ್ಯ ಸುದ್ದಿಯಲ್ಲಿದ್ದರು. ಈಗ ಮತ್ತೆ ನೂತನ ಕೇಶ ವಿನ್ಯಾಸದ ಮೂಲಕ ಸದಾ ಸುದ್ದಿಯಲ್ಲಿದ್ದಾರೆ. ಹಾಗೆ ಇವರ ಜೊತೆ ರೋಹಿತ್ ಶರ್ಮ ಹಾಗೂ ಅಜಿಂಕ್ಯ ರಹಾನೆ ಕೂಡಾ ಕೇಶ ವಿನ್ಯಾಸವನ್ನು ಬದಲಾಯಿಸಿಕೊಂಡಿದ್ದಾರೆ.
ಪಾಂಡ್ಯ ಅವರ ತೆಲೆಗೆ ಕತ್ತರಿ ಹಾಕಿದ್ದು ಆಲೀಮ್ ಹಕೀಂ. ಈ ಹೇರ್ ಸ್ಟೈಲ್ ನನಗೆ ತುಂಬಾ ಇಷ್ಟ ಆಯ್ತು ಎಂದು ಅವರ ಪ್ರತಿಭೆಯನ್ನು ಗುರುತಿಸಿ ಇನ್‍ಸ್ಟಾಗ್ರಾಮ್ ನಲ್ಲಿ ಫೋಟೋ ಹಾಕಿದ್ದಾರೆ. ಈ ಚಿತ್ರಗಳು ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
https://www.instagram.com/p/BWnZgDshFjj/?taken-by=hardikpandya93

Leave a Reply