ಮೊಬೈಲ್ ಕದ್ದಿದ್ದಾನೆಂದು ಯುವಕನನ್ನು ತಲೆಕೆಳಗಾಗಿ ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ಡೆಹ್ರಾಡೂನ್: ಮೊಬೈಲ್ ಕಳ್ಳತನದ ಶಂಕೆಯ ಮೇಲೆ ಯುವಕನೊಬ್ಬನನ್ನು ತಲೆಕೆಳಗಾಗಿ ಮರಕ್ಕೆ ಕಟ್ಟಿ ಗ್ರಾಮಸ್ಥರು ಥಳಿಸಿದ ಅಮಾನವೀಯ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

ಹರಿದ್ವಾರದಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಯುವಕನನ್ನು ತಲೆಕೆಳಗಾಗಿ ಮರಕ್ಕೆ ಕಟ್ಟಿದ್ದ ಕೆಲವರು, ಕೋಲು ಹಿಡಿದು ಥಳಿಸಿದ್ದಾರೆ. ಪರಿಣಾಮ ಹಲ್ಲೆಗೆ ಒಳಗಾದ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಹರಿದ್ವಾರ ಪೊಲೀಸರು, ತನಿಖೆ ಆರಂಭಿಸಿದ್ದಾರೆ. ಇಂತಹದ್ದೇ ಘಟನೆ ಹರಿದ್ವಾರದಲ್ಲಿ ಕಳೆದ ತಿಂಗಳು ನಡೆದಿತ್ತು. ಕಳ್ಳತನ ಶಂಕೆಯ ಮೇಲೆ ಗ್ರಾಮಸ್ಥರು ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸಿದೆ ಆತನು ಮೃತಪಟ್ಟಿದ್ದ.

ಮೃತನ ಕುಟುಂಬಸ್ಥರು ಆರೋಪಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Comments

Leave a Reply

Your email address will not be published. Required fields are marked *