ಸಿಎಂಗೆ ಮುಖ ತೋರಿಸಲು ಆಗುತ್ತಿಲ್ಲ: ಶಾಸಕ ಹರ್ಷವರ್ಧನ್

ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಅವರಿಗೆ ಮುಖ ತೋರಿಸಲು ಆಗುತ್ತಿಲ್ಲ ಎಂದು ನಂಜನಗೂಡು ಶಾಸಕ ಹರ್ಷವರ್ಧನ್ ಬೇಸರ ವ್ಯಕ್ತಪಡಿಸಿದ್ದಾರೆ.

ಶಾಸಕ ಹರ್ಷವರ್ಧನ್ ಬಿಜೆಪಿ ತೊರೆಯುತ್ತಿದ್ದಾರೆ ಎಂಬ ಊಹಾಪೋಹಕ್ಕೆ ಪ್ರತಿಕ್ರಿಯಿಸಿದ ಅವರು, ಸ್ವಪಕ್ಷೀಯರ ವಿರುದ್ಧ ಕೂಡ ಹರಿಹಾಯ್ದರು. ಬಿಜೆಪಿ ಬಿಡುವ ಯಾವುದೇ ಪ್ರಶ್ನೆ ನಮ್ಮ ಮುಂದೆ ಇಲ್ಲ. ನಾನು ಕಾಂಗ್ರೆಸ್ ನಾಯಕರನ್ನೆ ಬಿಜೆಪಿಗೆ ಕರೆ ತರಲು ಪ್ರಯತ್ನಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕುರ್ಚಿಗಾಗಿ ಹಗಲುಗನಸು ಕಾಣ್ತಿದ್ದಾರೆ ಹೀಗಾಗಿ ಏನೇನೋ ಮಾತನಾಡುತ್ತಿದ್ದಾರೆ: ಶ್ರೀರಾಮುಲು

ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಹರ್ಷವರ್ಧನ್ ಬಿಜೆಪಿ ತೊರೆಯುವ ಮುನ್ಸೂಚನೆ ಇದೆ ಎಂದು ಮಾಧ್ಯಮಗಳು ಬಿಂಬಿಸಿವೆ. ನನ್ನನ್ನು ಯಾವುದೇ ಮಾಧ್ಯಮದವರು ದೂರವಾಣಿ ಕರೆ ಮಾಡಿಯೂ ಸಹ ಈ ವಿಚಾರವಾಗಿ ಪ್ರಶ್ನಿಸಿಲ್ಲ. ಈ ಸುದ್ದಿ ನೋಡಿ ಸಿಎಂ ನನ್ನನ್ನು ಪದೇ ಪದೇ ಪ್ರಶ್ನಿಸುತ್ತಿದ್ದಾರೆ. ಹೀಗಾಗಿ ಸಿಎಂಗೆ ಮುಖ ತೋರಿಸಲು ಆಗುತ್ತಿಲ್ಲ ಎಂದರು. ಇದನ್ನೂ ಓದಿ: ಮತ್ತೆ ಚೀನಾ ಸೈನಿಕರ ಕಿರಿಕ್ – ಭಾರತ ಗಡಿ ಪ್ರವೇಶಿಸಿ ಸೇತುವೆ ಧ್ವಂಸ

ನಮ್ಮ ಪಕ್ಷದವರೇ ನನ್ನ ಅಭಿವೃದ್ಧಿ ಕೆಲಸಗಳನ್ನು ಸಹಿಸಿಕೊಳ್ಳುತ್ತಿಲ್ಲ. ಪಕ್ಷದಲ್ಲಿರುವ ಕೆಲ ನನ್ನ ಹಿತಶತ್ರುಗಳೇ ಇಂತಹ ಕೆಲವು ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ. ಅವರ ಈ ಆಟದ ಬಗ್ಗೆ ನನಗೆ ತಿಳಿದಿದೆ. ಯಾವುದೇ ಕಾರಣಕ್ಕೂ ನಾನು ಬಿಜೆಪಿ ಪಕ್ಷ ಬಿಡುವುದಿಲ್ಲ ಎಂದು ಹೇಳಿದರು.

Comments

Leave a Reply

Your email address will not be published. Required fields are marked *