ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸಲಿರುವ ಇತಿಹಾಸ ಪ್ರಸಿದ್ಧ ಹಾಸನಾಂಬ (Hasanamba) ದೇವಿಯ ಜಾತ್ರಾ ಮಹೋತ್ಸವ ಅ.13 ರಿಂದ ಅ.27 ರವರೆಗೆ ನಡೆಯಲಿದ್ದು, ಇಂದು ದೇವಿಯ ಒಡವೆಗಳನ್ನು ದೇವಾಲಯಕ್ಕೆ (Temple) ಕೊಂಡೊಯ್ಯಲಾಯಿತು.

ಹಾಸನ (Hassana) ತಹಶೀಲ್ದಾರ್ ನಟೇಶ್ ಸಮ್ಮುಖದಲ್ಲಿ ಸಾಲಗಾಮೆ ರಸ್ತೆಯಲ್ಲಿರುವ ಜಿಲ್ಲಾ ಖಜಾನೆಯಿಂದ ಒಡವೆಗಳನ್ನು ಹೊರತಂದು ಪುಷ್ಪಾಲಂಕೃತ ಅಡ್ಡ ಪಲ್ಲಕ್ಕಿಯಲ್ಲಿ ಇರಿಸಲಾಯಿತು. ಸಂಪ್ರದಾಯಂತೆ ಮಡಿವಾಳರು ಪಂಜು ಹಿಡಿದು ಮತ್ತು ಮುತ್ತೈದೆಯರು ಆರತಿ ಬೆಳಗಿದರು. ಈ ವೇಳೆ ಭಕ್ತರು ಹಾಸನಾಂಬೆ ದೇವಿಗೆ ಜೈಕಾರ ಕೂಗಿದರು. ಬೆಳ್ಳಿ ರಥದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಮಂಗಳ ವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ಹಾಸನಾಂಬೆ ದೇಗುಲಕ್ಕೆ ತರಲಾಯಿತು. ಇದನ್ನೂ ಓದಿ: ಟೈರ್ ಬ್ಲಾಸ್ಟ್ ಆಗಿ ಬಸ್ ಪಲ್ಟಿ- ಚಾಲಕ ಸಾವು, 25 ಪ್ರಯಾಣಿಕರಿಗೆ ಗಾಯ

ಒಡವೆ ಕೊಂಡೊಯ್ಯುವ ರಸ್ತೆಗಳಲ್ಲಿ ಬಿಗಿ ಪೊಲೀಸ್ (Police) ಬಂದೋಬಸ್ತ್ ಮಾಡಲಾಗಿತ್ತು. ಈ ಬಾರಿ ಹದಿನೈದು ದಿನಗಳ ಕಾಲ ದೇವಾಲಯ ಬಾಗಿಲು ತೆರಯಲಿದ್ದು, ಮೊದಲ ದಿನ ಹಾಗೂ ಕೊನೆಯ ದಿನ ಮತ್ತು ಅ. 25 ರಂದು ಗ್ರಹಣ ಹಿನ್ನೆಲೆಯಲ್ಲಿ ಭಕ್ತರಿಗೆ ದರ್ಶನ ಇರುವುದಿಲ್ಲ. ಉಳಿದ ಹನ್ನೆರಡು ದಿನಗಳ ಕಾಲ ಗರ್ಭಗುಡಿಯ ಬಾಗಿಲು ತೆರಯಲಿದೆ. ಇದನ್ನೂ ಓದಿ: ತಾನು ಸುಧಾಕರ್‌ಗೆ ಆಶೀರ್ವಾದ ಮಾಡಲು ಬಂದಿದ್ದೇನೆ- ಮಹಿಳೆಯ ವಿಚಿತ್ರ ವರ್ತನೆ

Leave a Reply