ಹಾಸನ: ತಾಯಿಗೆ ಮೆಸೇಜ್ ಮಾಡಿ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಹೊರವಲಯದಲ್ಲಿ ನಡೆದಿದೆ.

ಹಾಸನದ ಖಾಸಗಿ ಶಾಲೆಯಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ ಬಾಲಕಿ ನಗರದ ಹೊರವಲಯದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಯತ್ನಿಸಿದ್ದಾಳೆ. ತಾಯಿಗೆ ಸೂಸೈಡ್ ಮಾಡಿಕೊಳ್ಳುವುದಾಗಿ ಮೆಸೇಜ್ ಹಾಕಿ ಕೆರೆಗೆ ಹಾರಿದ್ದ ಬಾಲಕಿ ಅದೃಷ್ಟವಶಾತ್ ಬದುಕುಳಿದಿದ್ದಾಳೆ. ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಬೆಳಗ್ಗೆಯಿಂದ ಅಗ್ನಿಶಾಮಕ ಸಿಬ್ಬಂದಿ ಕೆರೆಯಲ್ಲಿ ಬಾಲಕಿಗಾಗಿ ಹುಡುಕಾಟ ನಡೆಸಿದ್ದರು. ಬಾಲಕಿ ಕೆರೆಯಲ್ಲಿದ್ದ ಮುಳ್ಳಿನ ಪೊದೆಗೆ ಸಿಲುಕಿ ಅದೃಷ್ಟವಶಾತ್ ಬದುಕುಳಿದಿದ್ದಾಳೆ. ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನ ಶಾಲೆಯಲ್ಲಿ ಕೊರೊನಾ ಸ್ಫೋಟ – 33 ವಿದ್ಯಾಥಿಗಳಿಗೆ ಸೋಂಕು
ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನನ್ನು ಕ್ಷಮಿಸಿ ಎಂದು ತಾಯಿ ಮೊಬೈಲ್‌ಗೆ ಮೆಸೇಜ್ ಕಳುಹಿಸಿದ್ದಳು. ಮೆಸೇಜ್ ನೋಡಿದ ನಂತರ ಕೂಡಲೇ ಪೋಷಕರು ಪೊಲೀಸರಿಗೆ ಸುದ್ದಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದಿಂದ ಬಾಲಕಿಗಾಗಿ ಹುಡುಕಾಟ ನಡೆಸಿದ್ದರು. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್

ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply