ಅಕ್ರಮ ಗೋಮಾಂಸ ಮಾರಾಟಕ್ಕೆ 60 ಕ್ಕೂ ಹೆಚ್ಚು ಗೋವುಗಳ ವಧೆ – 10 ಸಾವಿರ ಕೆಜಿ ಗೋಮಾಂಸ ಪೊಲೀಸರ ವಶಕ್ಕೆ

ಹಾಸನ: ಅಕ್ರಮವಾಗಿ ಗೋಮಾಂಸ ಮಾರಾಟಕ್ಕಾಗಿ 60 ಕ್ಕೂ ಹೆಚ್ಚು ಗೋವುಗಳನ್ನು ವಧೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಗೂರು ರಸ್ತೆ ಬಳಿ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು, 10 ಸಾವಿರ ಕೆಜಿ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ 5 ಗೋವುಗಳನ್ನು ರಕ್ಷಣೆ ಮಾಡಿದ್ದಾರೆ.

ಗೋವುಗಳನ್ನು ಹತ್ಯೆ ಮಾಡುವಾಗಲೇ ಪೊಲೀಸರು ದಾಳಿ ನಡೆಸಿದ್ದಾರೆ. ಗೋಮಾಂಸ ಮಾರಾಟಕ್ಕಾಗಿ ಸುಮಾರು 60 ಕ್ಕೂ ಗೋವುಗಳನ್ನು ಹತ್ಯೆ ಮಾಡಿ ನೇತು ನೇತುಹಾಕಲಾಗಿತ್ತು. ಮಹಮದ್ ಅಬ್ದುಲ್ ಹಕ್ ಎಂಬಾತನ ವಿರುದ್ಧ ಆರೋಪ ಕೇಳಿಬಂದಿದೆ.

ಗೋವುಗಳ ರಕ್ತವನ್ನು ಕೆರೆಗೆ ಹರಿಸಲಾಗುತ್ತಿತ್ತು. ಪೊಲೀಸರು ದಾಳಿ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.