ಸಿಎಂ ನಿಧಿಗೆ 10 ಲಕ್ಷ ರೂ. ನೀಡಿದ ಶ್ರವಣಬೆಳಗೊಳ ಜೈನ ಮಠ

ಹಾಸನ: ಕರೊನಾ ಸಂತ್ರಸ್ತರಿಗೆ ನೆರವಾಗಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ಶ್ರವಣಬೆಳಗೊಳದ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಶ್ರೀ ಕ್ಷೇತ್ರದ ವತಿಯಿಂದ 10 ಲಕ್ಷ ರೂಗಳನ್ನು ನೀಡಿದ್ದಾರೆ.

ಭಾರತ ಸೇರಿದಂತೆ ವಿಶ್ವದಾದ್ಯಂತ ಕೊರೊನಾ ಸೋಂಕಿನಿಂದಾಗಿ ಲಕ್ಷಾಂತರ ಜನರು ಅಪಾಯಕ್ಕೆ ಸಿಲುಕಿದ್ದಾರೆ. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರೂ ಮಾನವೀಯ ನೆಲೆಯಲ್ಲಿ ಸ್ಪಂದಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಶ್ರೀಗಳು ಹೇಳಿದ್ದಾರೆ.

ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಭಾರತದಲ್ಲಿ ಸೋಂಕಿನಿಂದ ಉಂಟಾಗಬಹುದಾದ ಹಾನಿಯನ್ನು ತಡೆಯಲು ಮತ್ತು ಆರೋಗ್ಯದ ದೃಷ್ಟಿಯಿಂದ ದೇಶದಾದ್ಯಂತ ಮುಂಜಾಗ್ರತಾ ಕ್ರಮವಾಗಿ ಲಾಕ್‍ಡೌನ್ ಘೋಷಣೆ ಮಾಡಿ ಕೊರೊನಾ ವೈರಸ್ ತಡೆಗಟ್ಟುವಲ್ಲಿ ಅತ್ಯಂತ ಮಹತ್ತರ ನಿರ್ಧಾರ ಕೈಗೊಂಡಿರುವುದು ಉಪಯುಕ್ತ ಹಾಗೂ ಶ್ಲಾಘನೀಯವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *