ಬೆಳ್ಳಂಬೆಳಗ್ಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೆಚ್‌ಡಿಡಿ ದಂಪತಿ ಭೇಟಿ

ಮಂಗಳೂರು: ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ (HD Deve Gowda) ದಂಪತಿ ಇಂದು ಮುಂಜಾನೆ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ (Kukke Subrahmanya) ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಹೆಚ್.ಡಿ. ದೇವೇಗೌಡ ಹಾಗೂ ಪತ್ನಿ ಚನ್ನಮ್ಮ ಬೆಳ್ಳಂಬೆಳಗ್ಗೆ ಶ್ರೀ ಕ್ಷೇತ್ರ ಕುಕ್ಕೆಗೆ ಆಗಮಿಸಿ ವಿಶೇಷ ಪೂಜೆಗಳನ್ನು ಸಲ್ಲಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರ ಬಂದ್ಮೇಲೆ ಮುಸ್ಲಿಮರು ಚಿಗುರಿಕೊಂಡಿದ್ದಾರೆ: ಚಕ್ರವರ್ತಿ ಸೂಲಿಬೆಲೆ

ಹೆಚ್‌ಡಿಡಿ ದಂಪತಿ ಭಾನುವಾರ ಮಧ್ಯಾಹ್ನ ಹೆಲಿಕಾಪ್ಟರ್ (Helicopter) ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಬೇಕಿತ್ತು. ಆದರೆ ಮೋಡ ಕವಿದ ವಾತಾವರಣವಿದ್ದ ಹಿನ್ನೆಲೆ ಹೆಲಿಕಾಪ್ಟರ್ ಟೇಕ್ ಆಫ್ ಆಗಲಿಲ್ಲ. ಬಳಿಕ ದಂಪತಿ ವಿಮಾನದ ಮೂಲಕ ಮಂಗಳೂರಿಗೆ (Mangaluru) ಬಂದು ತಡರಾತ್ರಿ ಸುಬ್ರಹ್ಮಣ್ಯಕ್ಕೆ ತೆರಳಿದ್ದಾರೆ. ಇದನ್ನೂ ಓದಿ: ಊಟಿಯಂತಾದ ಬೆಂಗಳೂರು- 4 ದಿನ ಮಳೆ ಸಾಧ್ಯತೆ

ಇಂದು ಮುಂಜಾನೆ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆಗಳನ್ನು ಸಲ್ಲಿಸಿದ್ದಾರೆ. ಇದನ್ನೂ ಓದಿ: ಪ್ರಯಾಣಿಕರಿಗೆ ಗುಡ್‌ನ್ಯೂಸ್- ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]