ಎನ್‌ಡಿಎ ಒಕ್ಕೂಟಕ್ಕೆ ಅಧಿಕೃತವಾಗಿ ಜೆಡಿಎಸ್‌ ಸೇರ್ಪಡೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿರುವ ಕಾಂಗ್ರೆಸ್‌ ಸೋಲಿಸಲು ಬಿಜೆಪಿ ನೇತೃತ್ವದ ಎನ್‌ಡಿಎ (NDA) ಒಕ್ಕೂಟಕ್ಕೆ ಜೆಡಿಎಸ್‌ (JDS) ಅಧಿಕೃತವಾಗಿ ಸೇರ್ಪಡೆಯಾಗಿದೆ.

ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿ ಇಂದು ಗೃಹ ಸಚಿವ ಅಮಿತ್‌ ಶಾ (Amit Shah) ನಿವಾಸಕ್ಕೆ ತೆರಳಿ ಮಾಜಿ ಸಿಎಂ ಕುಮಾರಸ್ವಾಮಿ (Kumaraswamy) ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆ ನಡೆಸಿದ್ದಾರೆ.

ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಜೊತೆಗೆ ಹೆಚ್.ಡಿ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ.

ಜೆಡಿಎಸ್‌ 6 ಕ್ಷೇತ್ರಗಳನ್ನು ಕೇಳಿದ್ದು, ಬಿಜೆಪಿ 4 ಕ್ಷೇತ್ರಗಳನ್ನು ನೀಡಲು ಸಿದ್ಧವಿದೆ ಎನ್ನಲಾಗುತ್ತಿದೆ. ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರದ ಜೊತೆ ಮೈಸೂರಿನ ಮೇಲೂ ಜೆಡಿಎಸ್‌ ಕಣ್ಣಿಟ್ಟಿದೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]