ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ: ಎಚ್‍ಡಿಕೆ

ಬೆಂಗಳೂರು: ಹೆಚ್.ಡಿ ಕುಮಾರಸ್ವಾಮಿಯವರ ಪ್ರೀತಿಯ ಪುತ್ರ ನಿಖಿಲ್ ಕುಮಾರ್ ಸ್ವಾಮಿ ದಂಪತಿಗೆ ಗಂಡು ಮಗು ಜನನವಾಗಿದೆ. ಈ ಮೂಲಕವಾಗಿ ತಾವು ತಾತ ಆಗಿರುವ ಸಂತೋಷದ ವಿಚಾರವನ್ನು ಹೆಚ್‍ಡಿಕೆ ಟ್ವೀಟ್ ಮಾಡುವ ಮೂಲಕವಾಗಿ ತಿಳಿಸಿದ್ದಾರೆ.

ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಹೆಚ್.ಡಿ ಕುಮಾರಸ್ವಾಮಿಯವರು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ:  ಗೌಡ್ರ ಕುಟುಂಬದಲ್ಲಿ ಸಂಭ್ರಮ – ನಿಖಿಲ್, ರೇವತಿ ದಂಪತಿಗೆ ಗಂಡು ಮಗು

ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗೆ ಇಂದು ಗಂಡು ಮಗು ಜನಿಸಿದೆ. ಈ ಮೂಲಕ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ರೇವತಿ ಜನ್ಮ ನಿಡಿದ್ದಾರೆ. ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

ಹೆಚ್.ಡಿ ಕುಮಾರಸ್ವಾಮಿಯವರ ಪ್ರೀತಿಯ ಪುತ್ರ ನಿಖಿಲ್ ಕುಮಾರ್ ಸ್ವಾಮಿ ಪತ್ನಿ ರೇವತಿಗೆ ಕೆಲವು ದಿನಗಳ ಹಿಂದೆ ನಗರದ ಹೆಚ್‍ಎಸ್‍ಆರ್ ಲೇಔಟ್‍ನ ಮಾನ್ವಿ ಕನ್ವೆನ್ಷನ್ ಹಾಲ್‍ನಲ್ಲಿ ಸೀಮಂತ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕೊರೊನಾ ಕಾರಣದಿಂದಾಗಿ ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರು, ಕುಟುಂಬಸ್ಥರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.

2020ರ ಏಪ್ರಿಲ್ 17ರಂದು ಲಾಕ್‍ಡೌನ್ ಸಮಯದಲ್ಲಿ ನಿಖಿಲ್ ಹಾಗೂ ರೇವತಿ ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿರುವ ಫಾರ್ಮ್ ಹೌಸ್‍ನಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕೆಲವು ತಿಂಗಳ ಹಿಂದಷ್ಟೇ ಮಾಜಿ ಸಿಎಂ. ಹೆಚ್.ಡಿ ಕುಮಾರಸ್ವಾಮಿಯವರು ತಾವು ತಾತಾ ಆಗುತ್ತಿರುವ ಖುಷಿ ವಿಚಾರವನ್ನು ಮಾಧ್ಯಮದ ಮುಂದೆ ಹಂಚಿಕೊಂಡಿದ್ದರು. ಇದೀಗ ಮುದ್ದಿನ ಸೊಸೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಗೌಡರ ಕುಟುಂಬದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ.

Comments

Leave a Reply

Your email address will not be published. Required fields are marked *