JDS ಜೊತೆ ಹೊಂದಾಣಿಕೆ ಸಾಹಸಕ್ಕೆ ಕೈಹಾಕಿ, ನಿಮ್ಮ ಕುರ್ಚಿಗೆ ಕುತ್ತು ತಂದ್ಕೋಬೇಡಿ- ಸಿಎಂಗೆ ರೇವಣ್ಣ ಸಲಹೆ

ಹಾಸನ: ಮುಳುಗುವ ಹಡಗಿನ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದು ಬೇಡ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ತಿರುಗೇಟು ನೀಡಿದ್ದಾರೆ.

ಎರಡು ಮಹಾನಗರ ಪಾಲಿಕೆಗಳಲ್ಲಿ ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ವಿಚಾರವಾಗಿ ಮಾತನಾಡಿದ ಅವರು, ಮುಳುಗುವ ಹಡಗಿನ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದು ಬೇಡ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ನಟ ಅಕ್ಷಯ್​ ಕುಮಾರ್​ಗೆ ಮಾತೃವಿಯೋಗ

ಜೆಡಿಎಸ್ ಮುಳುಗುವ ಹಡಗು ಎಂದು ಈಗಾಗಲೇ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಹೀಗಾಗಿ ಜೆಡಿಎಸ್ ಜೊತೆ ಹೊಂದಾಣಿಕೆಯಂತಹ ಸಾಹಸಕ್ಕೆ ಕೈಹಾಕಿ ಮುಖ್ಯಮಂತ್ರಿಗಳು ತಮ್ಮ ಕುರ್ಚಿಗೆ ಕುತ್ತು ತಂದುಕೊಳ್ಳಬೇಡಿ. ಮುಳುಗುವ ಹಡಗಿನ ಜೊತೆ ಹೊಂದಾಣಿಕೆ ಬೇಡ, ಇನ್ನೂ ಎರಡು ವರ್ಷ ನೀವೆ ಸಿಎಂ ಆಗಿ ಇರಬೇಕು. ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದು ಇಷ್ಟೇ, ನೀವು ಹೊಂದಾಣಿಕೆ ಮಾಡಿಕೊಳ್ಳಲು ಹೋಗಿ ತೊಂದರೆ ಮಾಡಿಕೊಳ್ಳಬೇಡಿ ಎಂದು ಸಿಎಂಗೆ ಕಿವಿಮಾತು ಹೇಳಿದ್ದಾರೆ.

Comments

Leave a Reply

Your email address will not be published. Required fields are marked *