ಇವಿಎಂ ವಿರುದ್ಧ ಹೋರಾಟಕ್ಕೆ ಮುಂದಾದ ಹೆಚ್‍ಡಿಡಿ

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸಬೇಕು ಎನ್ನುವ ಕೂಗು ಜೋರಾಗಿದೆ. ಇವಿಎಂ ವಿರುದ್ಧದ ಹೋರಾಟಕ್ಕೆ ಈಗ ಸ್ವತಃ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್‍ಡಿ ದೇವೇಗೌಡರು ಮುಂದಾಳತ್ವ ವಹಿಸಿಕೊಂಡಿದ್ದಾರೆ.

ಇವಿಎಂ ವಿರುದ್ಧ ಗೌಡರ ನೇತೃತ್ವದಲ್ಲಿ ಜೆಡಿಎಸ್, ಎಡಪಕ್ಷಗಳು ಇನ್ನೆರಡು ದಿನಗಳಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಲಿವೆ. ಒಂದು ವೇಳೆ ಆಯೋಗ ಮನವಿಯನ್ನು ಸ್ವೀಕರಿಸದೇ ಹೋದ್ರೆ ಆಗ ಸುಪ್ರೀಂಕೋರ್ಟ್ ಗೆ ಹೋಗೋದಕ್ಕೂ ನಿರ್ಧರಿಸಲಾಗಿದೆ. ಖ್ಯಾತ ವಕೀಲ ಪ್ರಶಾಂತ್ ಭೂಷಣ್ ನೇತೃತ್ವದಲ್ಲಿ ಕಾನೂನು ಹೋರಾಟಕ್ಕೆ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಇವಿಎಂ ಹ್ಯಾಕಥಾನ್‍ಗೆ ಅವಕಾಶ ನೀಡುವಂತೆ ಕೋರಿ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು.

Comments

Leave a Reply

Your email address will not be published. Required fields are marked *