ಹಾವೇರಿ: ಹಾನಗಲ್ ತಾಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿಯೇ ಚಿಕಿತ್ಸೆ ನೀಡುತ್ತಿದ್ದ ನಕಲಿ ವೈದ್ಯನ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಕಲಿ ವೈದ್ಯ ಬಾನಪ್ಪ ವಾಲ್ಮೀಕಿ ಮನೆ ಮೇಲೆ ತಾಲೂಕು ಆರೋಗ್ಯಾಧಿಕಾರಿ ಡಾ.ಮಾರುತಿ ಚಿಕ್ಕಣ್ಣವರ ನೇತೃತ್ವದಲ್ಲಿ ದಾಳಿ ನಡೆದಿದೆ. ಈ ವೇಳೆ ಅಧಿಕಾರಿಗಳನ್ನು ಕಂಡ ನಕಲಿ ವೈದ್ಯ ಸ್ಥಳದಿಂದ ಪರಾರಿಯಾಗಿದ್ದಾನೆ. ಅಧಿಕಾರಿಗಳು ಮನೆಯನ್ನು ಪರಿಶೀಲನೆ ನಡೆಸಿದಾಗ ಮನೆಯಲ್ಲಿ ಸ್ಕೆತಾಸ್ಕೋಪ್, ಸಿರಿಂಜ್, ಔಷಧಿ ಬರೆಯಲು ಉಪಯೋಗಿಸುತ್ತಿದ್ದ ಚೀಟಿ ಮತ್ತು ವಿವಿಧ ಕಂಪೆನಿಯ ಔಷಧಿಗಳು ಪತ್ತೆಯಾಗಿವೆ.
ಔಷಧಿಗಳು ಮತ್ತು ದಾಳಿ ವೇಳೆ ಸಿಕ್ಕ ವಸ್ತುಗಳನ್ನು ತಾಲೂಕು ವೈದ್ಯಾಧಿಕಾರಿಗಳು ವಶಪಡಿಸಿಕೊಂಡು ಸೀಜ್ ಮಾಡಿದ್ದಾರೆ. ಈ ಎಣ್ಣೆ ಡಾಕ್ಟರ್ ಕಳೆದ ಕೆಲವು ವರ್ಷಗಳಿಂದ ಮನೆಯಲ್ಲೇ ರಾಜಾರೋಷವಾಗಿ ಕ್ಲಿನಿಕ್ ನಡೆಸ್ತಿದ್ದನು. ಯಾವುದೇ ಕೋರ್ಸ್ ಕಲಿಯದೆ ಬಾನಪ್ಪ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

Leave a Reply