ಸತತ 4 ಗಂಟೆ ಸುರಿದ ಮಳೆ – ದೇವಸ್ಥಾನದಲ್ಲಿ ನದಿಯಂತೆ ಹರಿದ ನೀರು

ಬೆಳಗಾವಿ: ಜಿಲ್ಲೆಯಾದ್ಯಂತ ಗುರುವಾರ ರಾತ್ರಿ ಭಾರೀ ಮಳೆಯಾಗಿದ್ದು, ದೇವಸ್ಥಾನದ ಒಳಗಡೆ ನೀರು ನುಗ್ಗಿ ಭಕ್ತರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು.

ಜಿಲ್ಲೆಯಲ್ಲಿ ಸತತ 4 ಗಂಟೆಗಳಿಂದ ಮಳೆ ಸುರಿದಿದೆ. ಪರಿಣಾಮ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ನೀರು ನುಗ್ಗಿದೆ. ಇದರಿಂದ ದೇವರ ದರ್ಶನಕ್ಕೆ ಬಂದಿದ್ದ ಭಕ್ತರು ದೇವಾಸ್ಥಾನದ ಒಳಗೆ ಪ್ರವೇಶಿಸಿದ್ದರಿಂದ ಭಕ್ತರಲ್ಲಿ ಆತಂಕ ಹೆಚ್ಚಾಗಿತ್ತು.

ದೇವಾಸ್ಥಾನದ ಒಳಗೆ ನೀರು ನದಿಯಂತೆ ಹರಿದಿದ್ದು, ಜನರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿತ್ತು. ಅಷ್ಟೇ ಅಲ್ಲದೇ ದೇವಾಲಯದ ಆವರಣದಲ್ಲಿ ನೀರು ಹರಿದು, ದೇವಾಲಯದ ಹೊರಗಡೆ ಇದ್ದ ಅಂಗಡಿಗಳಿಗೂ ನೀರು ನುಗ್ಗಿ ಸಾವಿರಾರು ರೂಪಾಯಿ ನಷ್ಟವಾಗಿದೆ.

Comments

Leave a Reply

Your email address will not be published. Required fields are marked *