ನಿಲ್ಲದ ವರುಣನ ಅಬ್ಬರ- ಇಂದು, ನಾಳೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಮಲೆನಾಡಿನಲ್ಲಿ ವರುಣನ ಅಬ್ಬರ ಮುಂದುರಿದಿದೆ. ಇಂದು, ನಾಳೆ ಭಾರೀ ಮಳೆಯ ಮುನ್ಸೂಚನೆ ಇದ್ದು, ಮಡಿಕೇರಿ, ಚಿಕ್ಕಮಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಿಸಲಾಗಿದೆ.

ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಸುರಿದ ಭಾರೀ ಮಳೆಗೆ ತಾಲೂಕಿನ ಕನ್ನಹಡ್ಲು ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ತರೀಕೆರೆ ಪಟ್ಟಣದಲ್ಲಿ ಮಳೆಗೆ ಎರಡು ಮನೆಗಳ ಗೋಡೆ ಕುಸಿದಿದೆ.

ಹಾಸನದಲ್ಲಿನ ವರ್ಷಧಾರೆಗೆ ಕೆಲವು ಕಡೆ ಭೂಕುಸಿತವಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹೇಮಾವತಿ ಡ್ಯಾಮ್ ಭರ್ತಿಗೆ ಕೇವಲ 7 ಅಡಿ ಬಾಕಿ ಇದೆ. ಯಾವುದೇ ಕ್ಷಣದಲ್ಲಾದ್ರೂ ಹೆಚ್ಚಿನ ನೀರು ಹೊರಬಿಡುವ ಸಾಧ್ಯತೆ ಇದ್ದು, ಸುರಕ್ಷಿತ ಸ್ಥಳಗಳಿಗೆ ತೆರಳಲು ನದಿ ಪಾತ್ರದ ಜನರಿಗೆ ಸೂಚನೆ ನೀಡಲಾಗಿದೆ. ಕೊಡಲಿನಲ್ಲೂ ಯಥಾ ಸ್ಥಿತಿ ಮುಂದುವರಿದೆ. ಇದನ್ನೂ ಒದಿ: ನಿಲ್ಲದ ಮಳೆ: ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಶಾಲಾ ಕಾಲೇಜು ರಜೆ

ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಕಾವೇರಿ, ಲಕ್ಮ್ಣಣ ತೀರ್ಥ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ವರುಣನ ಆರ್ಭಟ ಇಳಿಮುಖವಾಗಿದ್ರೂ, ಸಿದ್ದಾಪುರ ಭಾಗದ 250 ಎಕರೆ ಕೃಷಿ ಭೂಮಿ ಪ್ರದೇಶ ಜಲಾವೃತಗೊಂಡಿದೆ. ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು, ಕೃಷ್ಣಾನದಿ ತೀರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಅತ್ತ, ಮುಂಬೈನಲ್ಲಿ ಪರಿಸ್ಥಿತಿ ಸುಧಾರಿಸಿಲ್ಲ.

ಮೈಸೂರಿನಲ್ಲಿ ಯುವಕ ನೀರುಪಾಲು:
ಗುರುವಾರ ಕಪಿಲಾ ನದಿಯಲ್ಲಿ ಈಜಲು ಹಾರಿದ್ದ ಮೂವರು ಯುವಕರಲ್ಲಿ ಒಬ್ಬರು ನಾಪತ್ತೆಯಾಗಿದ್ದಾರೆ. ಎಚ್.ಡಿ.ಕೋಟೆ ತಾಲೋಕಿನ ಮಾದಾಪುರ ಸೇತುವೆ ಬಳಿ ಈ ಘಟನೆ ನಡೆದಿದೆ. ಜಲಾಶಯದಿಂದ ಏಕಾಏಕಿ 50 ಕ್ಯೂಸೆಕ್ ನೀರು ಹೊರಬಿಟ್ಟ ಹಿನ್ನಲೆಯಲ್ಲಿ 24 ವರ್ಷದ ಉಮೇಶ್ ಕೊಚ್ಚಿ ಹೋಗಿದ್ದಾರೆ. ಜೊತೆಯಲ್ಲಿದ್ದ ಚಿಕ್ಕನಾಯ್ಕ, ಸುರೇಶ್ ಪ್ರಾಣಾಪಾಯದಿಂದ ಪಾರಾಗಿದ್ದು, ಉಮೇಶ್‍ಗಾಗಿ ಶೋಧ ಕಾರ್ಯ ನಡೆಯುತ್ತಿದೆ.

Comments

Leave a Reply

Your email address will not be published. Required fields are marked *