ಬೆಂಗಳೂರು: ಇತ್ತೀಚೆಗೆ ಸ್ಯಾಂಡಲ್‍ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸುತ್ತಿರುವ ಬಹು ನಿರೀಕ್ಷಿತ `ಯಜಮಾನ’ ಚಿತ್ರದ ಶೂಟಿಂಗ್ ಸೆಟ್‍ಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದರು. ಆದರೆ ಈಗ ಆ ಭೇಟಿ ಹಿಂದಿನ ರಹಸ್ಯ ಬಹಿರಂಗವಾಗಿದೆ.
ನಗರದ ಪ್ಯಾಲೇಸ್ ಗ್ರೌಂಡ್‍ನಲ್ಲಿ ಯಜಮಾನ ಚಿತ್ರದ ಹಾಡಿನ ಚಿತ್ರೀಕರಣ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದರು. ಸದ್ಯ ಈ ಚಿತ್ರದಿಂದ ಈಗ ಹೊಸದಂದು ಸಿಕ್ರೇಟ್ ರಿವೀಲ್ ಆಗಿದ್ದು, ಈ ಚಿತ್ರದಲ್ಲಿ ದರ್ಶನ್ ಅವರ ಪುತ್ರ ವಿನೀಶ್ ಕೂಡ ನಟಿಸುತ್ತಿದ್ದಾನೆ.
ಯಜಮಾನ ಚಿತ್ರದಲ್ಲಿ ಜೂನಿಯರ್ ದರ್ಶನ್, ವಿನೀಶ್ ಒಂದು ವಿಶೇಷ ಹಾಡಿನಲ್ಲಿ ನಟಿಸುತ್ತಿದ್ದಾರೆ. ಈ ಹಾಡಿನಲ್ಲಿ ಅಪ್ಪ ಮಗ ಒಟ್ಟಿಗೆ ಹೆಜ್ಜೆ ಹಾಕಲಿದ್ದಾರೆ. ‘ಐರಾವತ’ ಚಿತ್ರದ ನಂತರ ಯಜಮಾನ ಚಿತ್ರದಲ್ಲಿ ದರ್ಶನ್ ಹಾಗೂ ವಿನೀಶ್ ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ: ಯಜಮಾನ ಶೂಟಿಂಗ್ ಸೆಟ್ಟಿನಲ್ಲಿ ಕಾಣಿಸಿಕೊಂಡ್ರು ಯಜಮಾನಿ – ಫೋಟೋ ವೈರಲ್

ವಿಜಯಲಕ್ಷ್ಮಿ ಹಲವು ಬಾರಿ ತನ್ನ ಪತಿ ದರ್ಶನ್ ಅವರ ನಟನೆಯನ್ನು ನೋಡಲು ಶೂಟಿಂಗ್ ಸೆಟ್‍ಗೆ ಹೋಗುತ್ತಿದ್ದರು. ಆದರೆ ಈಗ ತಮ್ಮ ಮಗ ವಿನೀಶ್ ನಟನೆಯನ್ನು ನೋಡಲು ವಿಜಯಲಕ್ಷ್ಮಿ ಶನಿವಾರ ಯಜಮಾನ ಚಿತ್ರದ ಸೆಟ್‍ಗೆ ಭೇಟಿ ನೀಡಿದ್ದರು.
ಸತತ ಎರಡ್ಮೂರು ತಿಂಗಳಿನಿಂದ ಯಜಮಾನ ಸಿನಿಮಾ ಚಿತ್ರೀಕರಣದಲ್ಲಿ ಭಾಗಹಿಸುತ್ತಿರುವ ದರ್ಶನ್ ನಿರಂತರ ಶೂಟಿಂಗ್‍ನಲ್ಲಿ ತೊಡಗಿಕೊಂಡಿದ್ದಾರೆ. ಮೈಸೂರು, ಬೆಂಗಳೂರಿನಲ್ಲಿ ನಿರ್ಮಿಸಲಾಗಿದ್ದ ವಿಶೇಷವಾದ ಸೆಟ್ಟಿನಲ್ಲಿ ಸಿನಿಮಾ ಚಿತ್ರೀಕರಣ ನಡೆದಿದ್ದು, ಅಂತಿಮ ಹಂತ ತಲುಪಿದೆ. ಖ್ಯಾತ ನಿರ್ದೇಶಕ ಬಿ. ಸುರೇಶ್ ನಿರ್ಮಾಣದಲ್ಲಿ ಸಿನಿಮಾ ಮೂಡಿ ಬರುತ್ತಿದ್ದು, ದರ್ಶನ್ ಜೊತೆಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಸದ್ಯ ಈ ಚಿತ್ರದಲ್ಲಿ ದರ್ಶನ್ ಅವರ ಲುಕ್ ಹೇಗಿದೆ ಎಂದು ಅಭಿಮಾನಿಗಳಲ್ಲಿ ಕುತೂಹಲ ಇದೆ. ದರ್ಶನ್ ರೊಂದಿಗೆ ರಶ್ಮಿಕಾ ಮಂದಣ್ಣ ಜೋಡಿಯನ್ನು ನೋಡಲು ಸಿನಿರಸಿಕರು ಕಾಯುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply