ಸೂರಜ್ ರೇವಣ್ಣ ವಿರುದ್ಧ ಹೈಕೋರ್ಟ್‍ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ

Suraj revanna

ಹಾಸನ: ವೈವಾಹಿಕ ವಿವರಗಳನ್ನು ಮುಚ್ಚಿಟ್ಟು ಹಾಸನ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ಡಾ. ಸೂರಜ್ ರೇವಣ್ಣ ಅವರ ನಾಮಪತ್ರ ತಿರಸ್ಕರಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ ಎಂದು ಹೆಚ್‍ಡಿ.ರೇವಣ್ಣ ತಿಳಿಸಿದ್ದಾರೆ.

Revanna

ಏನಿದು ಪ್ರಕರಣ?
ಸೂರಜ್ ರೇವಣ್ಣ ವಿರುದ್ಧ, ಚನ್ನರಾಯಪಟ್ಟಣ ತಾಲೂಕು, ಕುಂದೂರು ಗ್ರಾಮದ ನಿವಾಸಿ ಕೆ.ಎಲ್ ಹರೀಶ್ ಅವರು, ಸೂರಜ್ ರೇವಣ್ಣ ತಮ್ಮ ಅಫಿಡವಿಟ್‍ನಲ್ಲಿ ವೈವಾಹಿಕ ವಿವರದ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ, ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠ, ಈಗಾಗಲೇ ಚುನಾವಣೆ ಆರಂಭವಾಗಿರುವುದರಿಂದ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಹೀಗಾಗಿ ಅರ್ಜಿದಾರರಿಗೆ ಆಕ್ಷೇಪಣೆಗಳಿದ್ದರೆ ಚುನಾವಣೆ ಬಳಿಕ ಅರ್ಜಿ ಸಲ್ಲಿಸಬಹುದು ಎಂದು ಸೂಚಿಸಿ, ಅರ್ಜಿ ವಜಾಗೊಳಿಸಿ ಆದೇಶಿಸಿರುವುದಾಗಿ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ ಹತ್ತು ಮೀಟರ್ ಆಳದಲ್ಲಿ ಸ್ಕೂಬಾ ಡೈವ್ ಮಾಡಿದ್ರು ಅಪ್ಪು

ಅರ್ಜಿದಾರರ ಆರೋಪ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣಪತ್ರದ ಅರ್ಜಿಯಲ್ಲಿ ಪತ್ನಿಗೆ ಸಂಬಂಧಿಸಿದ ಮಾಹಿತಿಗಳನ್ನು ಒದಗಿಸಿಲ್ಲ. ಪತ್ನಿಗೆ ಸಂಬಂಧಿಸಿದ ಎಲ್ಲ ಕಾಲಂಗಳಲ್ಲಿ ‘ಅನ್ವಯವಾಗುವುದಿಲ್ಲ’ ಎಂದು ನಮೂದಿಸಿದ್ದಾರೆ. ಅಲ್ಲದೇ ಸೂರಜ್ ರೇವಣ್ಣ ತಮ್ಮ ಬ್ಯಾಂಕ್ ಖಾತೆಗಳ ಬಗ್ಗೆ ಸರಿಯಾದ ಮಾಹಿತಿ ನೀಡಿಲ್ಲ. ಆದ್ದರಿಂದ, ಸೂರಜ್ ನಾಮಪತ್ರವನ್ನು ಅಂಗೀಕರಿಸಿರುವ ಜಿಲ್ಲಾ ಚುನಾವಣಾಧಿಕಾರಿ ಆದೇಶವನ್ನು ರದ್ದುಪಡಿಸಬೇಕು. ಈ ಸಂಬಂಧ ಅರ್ಜಿದಾರರು ಸಲ್ಲಿಸಿರುವ ಮನವಿ ಪತ್ರವನ್ನು ಪರಿಗಣಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು. ಹಾಗೆಯೇ, ಸೂರಜ್ ರೇವಣ್ಣ ಅವರ ಉಮೇದುವಾರಿಕೆಯನ್ನು ಅನರ್ಹ ಅಂತ ಘೋಷಿಸಬೇಕು ಎಂದು ಮನವಿ ಮಾಡಿದ್ದರು. ಅಲ್ಲದೇ ಡಿಸೆಂಬರ್ 10ರಂದು ನಡೆಯಲಿರುವ ಹಾಸನ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ಮಧ್ಯಂತರ ಮನವಿ ಮಾಡಿದ್ದರು. ಇದನ್ನೂ ಓದಿ: ಹತ್ತು ವರ್ಷ ಹಾಸನ ಜಿಲ್ಲೆಗೆ ಎರಡು ಪಕ್ಷಗಳ ಕೊಡುಗೆ ಏನು: ರೇವಣ್ಣ ಪ್ರಶ್ನೆ

Comments

Leave a Reply

Your email address will not be published. Required fields are marked *