ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್‌- ಉಪೇಂದ್ರ

ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್‌ಗೆ ಉಪೇಂದ್ರ ಇದೀಗ ಧನ್ಯವಾದ ತಿಳಿಸಿದ್ದಾರೆ.

ಹೈಕೋರ್ಟ್‌ ಎಫ್.ಐ.ಆರ್‌ಗೆ ಮಧ್ಯಂತರ ತಡೆ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಉಪೇಂದ್ರ ಪ್ರತಿಕ್ರಿಯಿಸಿದ್ದಾರೆ. ಅನ್ಯಾಯದ ಅನುಮಾನಕ್ಕೆ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ. ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ. ಅನಿರೀಕ್ಷಿತ ಬಿಸಿಲ ತಾಪಕ್ಕೆ ಸಹೃದಯಗಳು ಹಿಡಿದ ಪ್ರೀತಿಯ ಕೊಡೆ. ನನ್ನನ್ನು ತಿದ್ದಿ ತೀಡುತ್ತಿರುವ ನಿಮ್ಮೆಲ್ಲರನ್ನೂ ಇನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಹೃದಯ ನನಗೆ ಕೊಡೆ, ತಾಯಿ ನನಗೆ ಕೊಡೆ. ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ತನ್ನ ವಿರುದ್ಧ ದಾಖಲಾಗಿರುವ ಎಫ್.ಐ.ಆರ್ ರದ್ದುಗೊಳಿಸುವಂತೆ ನಟ ಉಪೇಂದ್ರ ಹೈಕೋರ್ಟ್ ಮೆಟ್ಟಿಲು ಏರಿದ್ದರು. ಇಂದು ಈ‌ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.ಇದನ್ನೂ ಓದಿ:ನಾರ್ವೆಯಲ್ಲಿ ತ್ರಿಷಾ ಜೊತೆ ಕಾಣಿಸಿಕೊಂಡ ವಿಜಯ್

ಲೈವ್ ವಿಡಿಯೋನಲ್ಲಿ ಮಾತನಾಡಿದ್ದ ನಟ ಉಪೇಂದ್ರ, ಮೊದಲಿಗೆ ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ರಾಷ್ಟ್ರೀಯ ಪಕ್ಷಗಳನ್ನು ಹೊರತುಪಡಿಸಿ ತಮ್ಮದೇ ವಾರಗೆಯ ಇತರೆ ಕೆಲವು ರಾಜಕೀಯ ಪಕ್ಷಗಳಿಗಿಂತಲೂ ಹೆಚ್ಚು ಮತವನ್ನು ಯಾವುದೇ ಪ್ರಚಾರವಿಲ್ಲದೆ ಪಡೆದಿದ್ದಾರೆ ಎಂದು ಹೆಮ್ಮೆಯಿಂದ ಹೇಳಿದರು.

ಬಳಿಕ ಮಾತು ಮುಂದುವರೆಸಿ ಯಾವುದೋ ಮಾತಿಗೆ ಊರೆಂದರೆ ಹೊಲೆಗೇರಿ ಇದ್ದೇ ಇರುತ್ತದೆ ಎಂದು ಹೊಲೆಗೇರಿಯನ್ನು ತುಚ್ಛವಾಗಿ ಕಾಣುವ ಗಾದೆಯೊಂದನ್ನು ಹೇಳಿದ್ದರು. ಉಪೇಂದ್ರರ ಈ ಮಾತಿಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಈ ಸಂಬಂಧ ಬೆಂಗಳೂರಿನ ಸಿ.ಕೆ ಅಚ್ಚುಕಟ್ಟು ಠಾಣೆಯಲ್ಲಿ ಉಪೇಂದ್ರ ವಿರುದ್ಧ ಜಾತಿ ನಿಂದನೆ ಆರೋಪದಡಿ ಕೇಸ್ ದಾಖಲಾಗಿತ್ತು.

[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]