ಶಿಕ್ಷಣ ಕೊಡಿ ಅಂದ್ರೆ ಮಂತ್ರಿ ಮಗನೇ ಕೇಸರಿ ಶಾಲು ಹಂಚಲು ಹೋಗಿದ್ದಾರೆ: ರೇವಣ್ಣ ಟೀಕೆ

ಹಾಸನ: ಜನಕ್ಕೆ ಶಿಕ್ಷಣ ಕೊಡಿ ಎಂದರೆ ಮಂತ್ರಿ ಮಗನೇ ಕೇಸರಿ ಶಾಲು ಹಂಚಲು ಹೋದರೆ ಏನಾಗುತ್ತದೆ ಹೇಳಿ. ಅವರ ಧರ್ಮವನ್ನು ಆಚರಣೆ ಮಾಡಿದರೆ ತೊಂದರೆ ಏನು ಎಂದು ಮಾಜಿ ಸಚಿವ ಹೆಚ್‍ಡಿ.ರೇವಣ್ಣ ಹಿಜಬ್ ಪರವಾಗಿ ಮಾತನಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ಇದು ಇಂದು ನಿನ್ನೆ ಶುರುವಾದ ಪದ್ಧತಿಯಲ್ಲ. ಹಿಂದಿನಿಂದಲೂ ಈ ಪದ್ಧತಿ ನಡೆದುಕೊಂಡು ಬಂದಿದೆ. ಯಾರೂ ಯಾವ ಬಟ್ಟೆಯನ್ನಾದರೂ ಹಾಕಿಕೊಂಡು ಬರಲಿ. ಸರ್ಕಾರ ಗಂಭೀರವಾಗಿ ಚಿಂತನೆ ಮಾಡಬೇಕು. ಇಲ್ಲವಾದಲ್ಲಿ ಸರ್ಕಾರಕ್ಕೆ ಏಟು ಎಂದು ಸಲಹೆ ನೀಡಿದರು.

ಒಂದು ಪಕ್ಷ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ಇನ್ನೊಂದು ಪಕ್ಷ ಹಿಂದೂಗಳ ಪರ ಇದೆ. ಎರಡು ಸಮಾಜವನ್ನು ಹೊಡೆದಾಡಿಸಲು ಹೋಗಬಾರದು. ಇಂತಹ ಕೆಟ್ಟ ಸರ್ಕಾರವನ್ನು ನನ್ನ ಜೀವನದಲ್ಲಿ ನೋಡಿರಲಿಲ್ಲ. ಇದು ಸತ್ತೋಗಿರುವ, ಪಾಪರ್ ಬಿದ್ದಿರುವ ಸರ್ಕಾರ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉಳ್ಳವರ ಪರ ಇದೆ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಡಿಕೆಶಿ ಪಾಕಿಸ್ತಾನ ಪರ ಹೇಳಿಕೆ ಕೊಡುವವರ ಪರವೋ ಅಥವಾ ಭಾರತ ಮಾತೆಯ ಪರವೋ: ರೇಣುಕಾಚಾರ್ಯ

ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಒಂದು ವರ್ಷ ಆದರೂ ಕೆಡಿಪಿ ಸಭೆ ಕರೆದಿಲ್ಲ. ಜಿಲ್ಲೆಯ ಪರಿಸ್ಥಿತಿ ಏನಾಗುತ್ತಿದೆ ಎಂಬುದು ತಿಳಿಯುತ್ತಿಲ್ಲ. ಸುಖಾಸುಮ್ಮನೆ ಅಧಿಕಾರಿಗಳಿಗೆ ಧಮ್ಕಿ ಹಾಕೋದು ಬಿಡಬೇಕು. ಜಿಲ್ಲೆಯಲ್ಲಿ ಇಷ್ಟ ಬಂದಂತೆ ಸಿಎಲ್ 7 ಲೈಸೆನ್ಸ್ ನೀಡಲಾಗಿದೆ. ಉದ್ಯಮಿಗಳು ನಾವು ಜಿಲ್ಲಾ ಉಸ್ತುವಾರಿ ಸಚಿವರ ಪಾರ್ಟ್‍ನರ್ಸ್‍ಗಳು ಎನ್ನುತ್ತಿದ್ದಾರೆ ಎಂದು ಗ್ರಾಮೀಣ ಸಚಿವ ಈಶ್ವರಪ್ಪ ಅವರ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಹಿಜಬ್ ನಮ್ಮ ಕುಟುಂಬದ ವಿವಾದ ಪಾಕಿಸ್ತಾನ ತಲೆಹಾಕಬಾರದು: ಫಾತಿಮಾ ಹುಸೇನ್ ಆಕ್ರೋಶ

ಶೇ.10 ಕೊಟ್ಟರೆ ಏನು ಬೇಕಾದರೂ ಕೆಲಸ ಮಾಡುತ್ತಾರೆ. ಇಂತಹ ಲೂಟಿ ಸರ್ಕಾರವನ್ನು ನಾನು ಎಂದು ನೋಡಿಯೇ ಇಲ್ಲ. ಸರ್ಕಾರದಲ್ಲಿರುವವರು ಲೂಟಿ ಹೊಡೆಯುತ್ತಿದ್ದಾರೆ. ಇಂತಹ ದುರ್ಬಲ ಮುಖ್ಯಮಂತ್ರಿಯನ್ನು ನಾನು ನೋಡಿರಲಿಲ್ಲ. ಪ್ರಧಾನಿ ಮೋದಿಯವರು ಸರ್ಕಾರದ ನಡೆ ಗಮನಿಸಬೇಕು. ಯಾವುದೇ ಕಾರಣಕ್ಕೂ 2023ರಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಬರಲ್ಲ. ಬಿಜೆಪಿ 40 ಸೀಟ್‍ಗೆ ಇಳಿಯುತ್ತದೆ. 2013ರಲ್ಲಿ ಆದ ರೀತಿ ಆಗುತ್ತದೆ ಎಂದು ಭವಿಷ್ಯ ನುಡಿದರು.

Comments

Leave a Reply

Your email address will not be published. Required fields are marked *