ಹಿಜಬ್ ವಿವಾದ: ಬೆಳಗಾವಿ ಪ್ಯಾರಾಮೆಡಿಕಲ್ ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆ

ಬೆಳಗಾವಿ: ಕಾಲೇಜುಗಳಲ್ಲಿ ಹಿಜಬ್ ಧರಿಸಲು ಅವಕಾಶ ನೀಡಿ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಬೆಳಗಾವಿ ವಿಜಯ್ ಪ್ಯಾರಾ ಮೆಡಿಕಲ್ ಕಾಲೇಜಿಗೆ ಮುಂದಿನ ಆದೇಶದವರೆಗೆ ಅನಿರ್ದಿಷ್ಟಾವಧಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ವಿಜಯ ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಪಾಟೀಲ್ ತಿಳಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ವೈಯಕ್ತಿಕವಾಗಿ ಮನವೊಲಿಕೆ ಮಾಡಲಾಗುತ್ತಿತ್ತು. ವಿದ್ಯಾರ್ಥಿಗಳ ಜೊತೆಗೆ ಒನ್ ಟು ಒನ್ ಮಾತುಕತೆ ಮಾಡಲಾಗಿದೆ ಎಂದು ಹೇಳಿದರು.

ಹಿಜಬ್‍ಗೆ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದರಿಂದ ನಮಗೆ ತೊಂದರೆ ಆಗುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕಾಲೇಜಿಗೆ ರಜೆ ಘೋಷಣೆ ಮಾಡಲಾಗುತ್ತಿದ್ದು, ಮುಂದಿನ ಆದೇಶ ಬರುವವರೆಗೂ ಅನಿರ್ದಿಷ್ಟವಧಿವರೆಗೆ ರಜೆ ಘೋಷಣೆ ಮಾಡಲಾಗುವುದು ಎಂದರು. ಇದನ್ನೂ ಓದಿ: ಹಿಜಬ್‍ಗೆ ಅವಕಾಶ ನೀಡಿ ಎಂದು ಪ್ರತಿಭಟಿಸುತ್ತಿದ್ದ 58 ವಿದ್ಯಾರ್ಥಿಗಳು ಸಸ್ಪೆಂಡ್!

ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಶಿಕ್ಷಣ ಕೊಡಲಾಗುತ್ತದೆ. ಪ್ರಕರಣ ಸುಖ್ಯಾಂತ ಆದ ಮೇಲೆ ತರಗತಿ ಪ್ರಾರಂಭ ಮಾಡಲಾಗುತ್ತದೆ. ಆನ್‍ಲೈನ್ ತರಗತಿಗಳನ್ನ ಮಾಡುವುದಿಲ್ಲ. ಎಷ್ಟು ದಿನ ತರಗತಿಗಳಿಗೆ ರಜೆ ಎಂಬುವುದನ್ನು ಡಿಸಿ ಅವರೊಂದಿಗೆ ಮಾತನಾಡಿ ಹೇಳುತ್ತೇನೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಹೈಕೋರ್ಟ್ ಮಧ್ಯಂತರ ಆದೇಶ ಪಾಲಿಸಿ – ಅಂಜುಮನ್ ಸಂಸ್ಥೆಯಿಂದ ಮನವಿ

Comments

Leave a Reply

Your email address will not be published. Required fields are marked *