ಎರಡು ದಿನ ಕಾಯಿರಿ – ಹಿಜಬ್‌ ವಿದ್ಯಾರ್ಥಿನಿಯರಿಗೆ ಸುಪ್ರೀಂ ಸೂಚನೆ

ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧದ ಮೇಲ್ಮನವಿಗಳನ್ನು ಶೀಘ್ರದಲ್ಲಿ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿದೆ.

SUPREME COURT

ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಮೇಲ್ಮನವಿ ಕುರಿತು ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ಮಂಗಳವಾರ ಸಿಜೆಐ ಪೀಠದ ಮುಂದೆ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು, ದಯವಿಟ್ಟು ಎರಡು ದಿನ ಕಾಯಿರಿ. ನಾನು ಪಟ್ಟಿ ಮಾಡುತ್ತೇನೆ ಎಂದು ಮೀನಾಕ್ಷಿ ಅರೋರಾ ಅವರಿಗೆ ತಿಳಿಸಿದ್ದಾರೆ. ಅವರು ವಿದ್ಯಾರ್ಥಿಗಳ ಪರವಾಗಿ ಪ್ರಕರಣದ ಆರಂಭಿಕ ವಿಚಾರಣೆಗೆ ಮೌಖಿಕವಾಗಿ ಪ್ರಸ್ತಾಪಿಸಿದರು. ಇದನ್ನೂ ಓದಿ: ವಿಭೂತಿ ಹಾಕಿದ್ದಕ್ಕೆ ಕತ್ತೆ ಅಂದ್ರು, ಬಲವಂತವಾಗಿ ಮತಾಂತರಿಸಲು ಯತ್ನಿಸಿದ್ರು – ಶಿಕ್ಷಕಿ ವಿರುದ್ಧ ವಿದ್ಯಾರ್ಥಿನಿ ಆರೋಪ

ಹಿಜಬ್‌ ಇಸ್ಲಾಂ ಧಾರ್ಮಿಕ ಆಚರಣೆಯ ಅಗತ್ಯ ಭಾಗವಲ್ಲ. ಶಾಲಾ-ಕಾಲೇಜುಗಳ ಸಮವಸ್ತ್ರದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶಿಸುವ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ.

ಅರ್ಜಿದಾರರಲ್ಲಿ ಒಬ್ಬರಾದ ನಿಬಾ ನಾಜ್, ಹೈಕೋರ್ಟಿನ ತೀರ್ಮಾನವನ್ನು ವಿರೋಧಿಸಿ, ʻಭಾರತೀಯ ಕಾನೂನು ವ್ಯವಸ್ಥೆಯು ಧಾರ್ಮಿಕ ಚಿಹ್ನೆಗಳನ್ನು ಧರಿಸುವುದನ್ನು, ಒಯ್ಯುವುದನ್ನು ಸ್ಪಷ್ಟವಾಗಿ ಗುರುತಿಸುತ್ತದೆ. ಮೋಟಾರು ವಾಹನ ಕಾಯ್ದೆಯು ಪೇಟ ಧರಿಸುವ ಸಿಖ್‌ರಿಗೆ ಹೆಲ್ಮೆಟ್ ಧರಿಸುವುದರಿಂದ ವಿನಾಯಿತಿ ನೀಡುತ್ತದೆ. ಸಿಖ್‌ರಿಗೆ ಕಿರ್ಪಾನ್‌ಗಳನ್ನು ವಿಮಾನದಲ್ಲಿ ಸಾಗಿಸಲು ಅನುಮತಿಸಲಾಗಿದೆ. ಆದರೆ ಮುಸ್ಲಿಂ ಹೆಣ್ಣುಮಕ್ಕಳಿಗೆ ಶಿಕ್ಷಣ ಪಡೆಯಲು ನಿರಾಕರಿಸುವುದು ಮತ್ತು ಕಾಲೇಜಿಗೆ ಹಿಜಬ್ ಧರಿಸಿದ್ದಕ್ಕಾಗಿ ಶಿಕ್ಷೆ ವಿಧಿಸುವುದು ಅವರ ಖಾಸಗಿತನದ ಹಕ್ಕನ್ನು ಉಲ್ಲಂಘಿಸಿದಂತೆʼ ಎಂದು ಮೇಲ್ಮನವಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಧ್ವನಿವರ್ಧಕಗಳನ್ನು ತೆಗೆದು ಹಾಕಿ : ಯುಪಿ ಸರ್ಕಾರ ಆದೇಶ

Comments

Leave a Reply

Your email address will not be published. Required fields are marked *