ಭಾರತದಲ್ಲಿ ಕಾಂಗ್ರೆಸ್ ನಿರ್ನಾಮವಾಗಲಿದೆ: ಜೈರಾಮ್ ಠಾಕೂರ್

ಶಿಮ್ಲಾ: ಭಾರತದ ರಾಜಕೀಯದಲ್ಲಿ ಕಾಂಗ್ರೆಸ್ ನಿರ್ನಾಮವಾಗಲಿದೆ ಎಂದು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಭವಿಷ್ಯ ನುಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಬಿಜೆಪಿಗೆ ಸಂಪೂರ್ಣ ಬೆಂಬಲ ನೀಡುತ್ತಿದ್ದಾರೆ. ಇದರಿಂದಾಗಿ ಮಿಷನ್ ರಿಪೀಟ್ 2022 ತನ್ನ ಗುರಿಯನ್ನು ಈಡೇರಿಸುವ ಮೂಲಕ ಗುಡ್ಡಗಾಡು ರಾಜ್ಯದಲ್ಲಿ ಬಿಜೆಪಿ ಮತ್ತೆ ತನ್ನ ಸರ್ಕಾರವನ್ನು ರಚಿಸಲಿದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು.

ಹಿಮಾಚಲ ಪ್ರದೇಶದಲ್ಲಿ ತಮ್ಮ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಸದ್ಯಕ್ಕೆ ಸಂಪುಟ ವಿಸ್ತರಣೆಯ ಆಲೋಚನೆಯಿಲ್ಲ. 2022ರ ವಿಧಾನಸಭಾ ಚುನಾವಣೆಯಲ್ಲೂ ಬಹುಮತ ಸಾಧಿಸಿ ಪುನಃ ಅಧಿಕಾರವನ್ನು ಹಿಡಿಯುತ್ತೇವೆ ಎಂದರು. ಇದನ್ನೂ ಓದಿ: ಶೀಘ್ರದಲ್ಲೇ ಕೋಪ- ದ್ವೇಷದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ: ರಾಹುಲ್ ಗಾಂಧಿ

ಸರ್ಕಾರಿ ನೌಕರರು ನಡೆಸುತ್ತಿರುವ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರತಿಭಟಿಸುವ ಮತ್ತು ತಮ್ಮ ಬೇಡಿಕೆಗಳ ಪರಿಹಾರವನ್ನು ಕೇಳುವ ಹಕ್ಕು ಅವರಿಗೆ ಯಾವಾಗಲೂ ಇದೆ. ಆದರೆ ಇಂದಿನ ದಿನಗಳಲ್ಲಿ ಅವರು ವರ್ತಿಸುತ್ತಿರುವ ರೀತಿ ಅರ್ಥವಾಗುತ್ತಿಲ್ಲ. ಅವರ ಬಹುತೇಕ ಎಲ್ಲಾ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಗಾಗಲೇ ಒಪ್ಪಿಕೊಂಡಿದೆ ಎಂದು ಹೇಳಿದರು. ಇದನ್ನೂ ಓದಿ: ಹಿಜಬ್‌ ತೀರ್ಪು ಪ್ರಕಟಿಸಿದ ಜಡ್ಜ್‌ಗಳಿಗೆ ಕೊಲೆ ಬೆದರಿಕೆ – ಕೇಸ್‌ ದಾಖಲು

Comments

Leave a Reply

Your email address will not be published. Required fields are marked *