ಪ್ರಭಾಸ್ ಜೊತೆ ಬ್ಯಾಕ್ ಟು ಬ್ಯಾಕ್ 3 ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್‌

ಕೆಜಿಎಫ್, ಕೆಜಿಎಫ್‌ 2, ಕಾಂತಾರ ಸಿನಿಮಾಗಳನ್ನು ನಿರ್ಮಾಣ ಮಾಡಿ ಸೈ ಎನಿಸಿಕೊಂಡಿರುವ ಹೊಂಬಾಳೆ ಫಿಲ್ಮ್ಸ್‌ (Hombale Fims) ಇದೀಗ ಸಲಾರ್‌ ಬಳಿಕ ಮತ್ತೆ ಪ್ರಭಾಸ್ ಜೊತೆ ಕೈ ಜೋಡಿಸಿದೆ. ಪ್ರಭಾಸ್ (Prabhas) ಜೊತೆ ಬ್ಯಾಕ್ ಟು ಬ್ಯಾಕ್ 3 ಸಿನಿಮಾಗಳನ್ನು ಮಾಡೋದಾಗಿ ಹೊಂಬಾಳೆ ಸಂಸ್ಥೆ ಅಧಿಕೃತವಾಗಿ ತಿಳಿಸಿದೆ.

ಈ ಹಿಂದೆ ಪ್ರಭಾಸ್‌ ನಟನೆಯ ಸಲಾರ್‌ ಚಿತ್ರವನ್ನು ಹೊಂಬಾಳೆ ಸಂಸ್ಥೆ ನಿರ್ಮಿಸಿತ್ತು. ಇದೀಗ ಮತ್ತೆ ನಟನ ಜೊತೆ 3 ಚಿತ್ರಗಳನ್ನು ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣ ಮಾಡಲಿದೆ. ಮುಂದಿನ 3 ವರ್ಷಗಳಲ್ಲಿ ಅಂದರೆ 2026, 2027, ಮತ್ತು 2028ಗೆ ಸಾಲು ಸಾಲು 3 ಸಿನಿಮಾಗಳು ರಿಲೀಸ್ ಆಗಲಿದೆ ಎಂದು ಹೊಂಬಾಳೆ ಸಂಸ್ಥೆ ಘೋಷಿಸಿದೆ. ಇದನ್ನೂ ಓದಿ:ಅನುಷ್ಕಾ ಶೆಟ್ಟಿ ಫ್ಯಾನ್ಸ್‌ಗೆ ಡಬಲ್ ಧಮಾಕ- ‘ಘಾಟಿ’ ಚಿತ್ರದ ಫಸ್ಟ್ ಲುಕ್ ಔಟ್

 

View this post on Instagram

 

A post shared by Hombale Films (@hombalefilms)

ರೆಬಲ್ ಸ್ಟಾರ್ ಜೊತೆಗೆ ಕೈಜೋಡಿಸುತ್ತಿರುವುದು ನಮಗೆ ಹೆಮ್ಮೆಯ ವಿಷಯ. ಭಾರತೀಯ ಸಿನಿಮಾದ ಸಾರವನ್ನು ಸಂಭ್ರಮಿಸುವ ಹಾಗೂ ಅದನ್ನು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗಲು ಈ ಕೈಜೋಡಿಸುವಿಕೆ ಅತ್ಯಂತ ಮಹತ್ವದ್ದಾಗಲಿದೆ. ಸಿನಿಮಾ ಪ್ರೇಮಿಗಳಿಗೆ ಮರೆಯಲಾಗದ ಸಿನಿಮಾ ಅನುಭವವನ್ನು ಕೊಡುವುದು ನಮ್ಮ ಘೋಷಣೆಯಾಗಿದೆ. ವೇದಿಕೆ ಸಜ್ಜಾಗಿದೆ, ಮುಂದಿನ ಹಾದಿ ಮಿತಿಯಿಲ್ಲದ್ದಾಗಿದೆ. ‘ಸಲಾರ್ 2’ (Salaar 2) ಸಿನಿಮಾದ ಜೊತೆಗೆ ನಮ್ಮ ಈ ಪಯಣ ಪ್ರಾರಂಭ ಆಗಲಿದೆ ಎಂದು ಹೊಂಬಾಳೆ ಫಿಲ್ಮ್ಸ್‌ ಗುಡ್ ನ್ಯೂಸ್ ಹಂಚಿಕೊಂಡಿದೆ.