ಮುಸುಕುಧಾರಿ ಬಂಧನ ಆಗಿರೋದು ನಿಜ, ಇದರ ಹಿಂದಿರುವ ಜಾಲವನ್ನ ಪತ್ತೆ ಮಾಡಲಾಗುವುದು: ಪರಮೇಶ್ವರ್‌

– ಎಸ್‌ಐಟಿ ಮುಖ್ಯಸ್ಥರಿಂದ ಪಿನ್‌ ಟು ಪಿನ್‌ ಡೀಟೇಲ್ಸ್ ಪಡೆದ ಗೃಹಸಚಿವರು

ಮಂಗಳೂರು/ಉಡುಪಿ: ಧರ್ಮಸ್ಥಳ (Dharmasthala) ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮುಸುಕುಧಾರಿ ಬಂಧನ ಆಗಿರುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್‌ (G Parameshwar) ಖಚಿತಪಡಿಸಿದ್ದಾರೆ.

ಮಾಸ್ಕ್ ಮ್ಯಾನ್ ಬಂಧನ ಆಗಿರುವುದು ನಿಜ. ಆತ ಪೊಲೀಸ್ ಕಸ್ಟಡಿಯಲ್ಲಿ ಇದ್ದಾನೆ. ತನಿಖೆ ಪೂರ್ಣಗೊಳ್ಳುವವರೆಗೆ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ. ಅಧಿಕಾರಿಗಳು ತನಿಖೆ (SIT Investigation) ಮುಂದುವರಿಸುತ್ತಾರೆ. ಹೆಚ್ಚಿನ ಮಾಹಿತಿ ಎಸ್‌ಐಟಿಯಿಂದ ಪಡೆಯುತ್ತೇನೆ. ಇದರ ಹಿಂದೆ ಯಾವ ಜಾಲ ಇದೆ ಅನ್ನುವುದನ್ನು ಪತ್ತೆ ಮಾಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೇ ಇದ್ದಾರೆ: ಮಾಸ್ಕ್ ಮ್ಯಾನ್ ಸ್ಫೋಟಕ ಹೇಳಿಕೆ

ಮುಂದುವರಿದು.. ಎಸ್‌ಐಟಿ ತನಿಖೆಯ ಮುಕ್ತಾಯ ಆಗುತ್ತಾ ಅಂತ ಹೇಳಲು ಬರುವುದಿಲ್ಲ. ಜೊತೆಗೆ ಬಂಧಿತನಿಗೆ ಮಂಪರು ಪರೀಕ್ಷೆ ಮಾಡಬೇಕಾ? ಬೇಡವಾ ಅನ್ನೋದು ಎಸ್‌ಐಟಿ ನಿರ್ಧಾರ ಮಾಡುತ್ತೆ. ಅಲ್ಲದೇ ಸುಜಾತ ಭಟ್ ವಿಚಾರ ಕೂಡ ತನಿಖೆಯಲ್ಲಿದೆ. ತನಿಖೆಯ ವರದಿಗಳು ಬರುವವರೆಗೆ ಬಹಿರಂಗಪಡಿಸಲು ಸಾಧ್ಯವಿಲ್ಲ. ಯಾವುದೇ ವಿಚಾರ ಬಹಿರಂಗಗೊಂಡರೆ ಎಸ್‌ಐಟಿ ಟಿತನಿಖೆಗೆ ಅಡ್ಡಿಯಾಗುತ್ತದೆ. ಯಾವುದನ್ನೂ ಈಗ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ತಮಿಳುನಾಡಿನಲ್ಲಿ ಹಣದ ಆಮಿಷವೊಡ್ಡಿ ಧರ್ಮಸ್ಥಳಕ್ಕೆ ಕರೆಸಿದ್ದರು: ಸತ್ಯ ಕಕ್ಕಿದ್ದ ಚಿನ್ನಯ್ಯ

ಬಿಜೆಪಿಯವರು ಅನೇಕ ಆರೋಪಗಳನ್ನ ಮಾಡಬಹುದು. ಬೇರೆ ಬೇರೆ ರೀತಿಯ ಹೇಳಿಕೆಗಳು ಬರಬಹುದು. ಹೇಳಿಕೆಗಳ ಆಧಾರದಲ್ಲಿ ತನಿಖೆ ಮಾಡಲು ಆಗಲ್ಲ. ಎಸ್‌ಐಟಿ ತನ್ನ ಅಂತಿಮ ವರದಿ ಸಲ್ಲಿಸುವವರಿಗೆ ಏನು ಹೇಳಲು ಆಗಲ್ಲ. ಯಾವ ಸೆಕ್ಷನ್‌ನಲ್ಲಿ ಬಂಧಿಸಲಾಗಿದೆ ಅನ್ನುವುದು ಎಸ್‌ಐಟಿಯವರಿಗೆ ಗೊತ್ತು. ದೂರುದಾರನ ಹೇಳಿಕೆ ಆಧಾರದಲ್ಲಿ ತನಿಖೆ ಪ್ರಾರಂಭಿಸಿದ್ದೆವು. ಆದ್ರೆ ಎಸ್‌ಐಟಿ ಹೇಳಿದ್ದೆಲ್ಲವನ್ನೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಂಗೆ ಆರೋಗ್ಯ ಸರಿಯಿಲ್ಲ, ಬೆದರಿಕೆಯಿದೆ – ರಕ್ಷಣೆ ಕೊಡಿ ಅಂತಾ ಪೊಲೀಸರಿಗೆ ಸುಜಾತ ಭಟ್ ಮನವಿ

ಇದಕ್ಕೂ ಮುನ್ನ ಮಂಗಳೂರು ಏರ್‌ಪೋರ್ಟ್‌ನಲ್ಲಿ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೋಹಂತಿ ಅವರಿಂದ ಮಾಹಿತಿ ಪಡೆದರು. ಬುರುಡೆ ಚಿನ್ನಯ್ಯನ ವಿಚಾರಣೆ ಹಾಗೂ ನಾಲ್ಕು ದಿನದ ಬೆಳವಣಿಗೆ ಬಗ್ಗೆ ಪಿನ್‌ ಟು ಪಿನ್‌ ಡೀಟೇಲ್ಸ್ ಪಡೆದರು. ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ದಕ್ಷಿಣ ಕನ್ನಡ ಎಸ್ಪಿ ಡಾ. ಅರುಣ್ ಕುಮಾರ್, ಎಸ್‌ಐಟಿ ಟೀಮ್‌ನ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು. ಇದನ್ನೂ ಓದಿ: ಎಲ್ಲಿಂದಲೋ ಬುರುಡೆ ತಂದು ಬುರುಡೆ ಬಿಟ್ಟಿದ್ದ ಚೆನ್ನಯ್ಯ!