ಗೃಹ ಸಚಿವಾಲಯದ ಕಚೇರಿಗೆ ಬಾಂಬ್ ಬೆದರಿಕೆ

ನವದೆಹಲಿ: ದೆಹಲಿಯಲ್ಲಿರುವ ಗೃಹ ಸಚಿವಾಲಯದ ಕಚೇರಿಗೆ (Home Ministry Office) ಬಾಂಬ್ ಬೆದರಿಕೆ ಮೇಲ್ ಬಂದಿದೆ.

ನವದೆಹಲಿಯ ನಾರ್ತ್ ಬ್ಲಾಕ್‌ನಲ್ಲಿರುವ ಪೊಲೀಸ್ ಕಂಟ್ರೋಲ್ ರೂಮ್‌ಗೆ ಬಾಂಬ್‌ ಬೆದರಿಕೆ (Bomb Threat) ಮೇಲ್‌ ಬಂದಿತ್ತು. ಕೂಡಲೇ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಗಿದೆ.

ತನಿಖೆಗೆ ಇಳಿದ ಪೊಲೀಸರಿಗೆ ಇದು ನಕಲಿ ಬೆದರಿಕೆ ಎನ್ನುವುದು ಗೊತ್ತಾಗಿದೆ. ಐಪಿ ವಿಳಾಸವನ್ನು ಆಧಾರಿಸಿ ಪೊಲೀಸರು ಪೊಲೀಸರು ಇಮೇಲ್‌ ಕಳುಹಿಸಿದ ವ್ಯಕ್ತಿಯ ಪತ್ತೆ ಕಾರ್ಯ ಆರಂಭಿಸಿದ್ದಾರೆ. ಸ್ನಿಫರ್ ಡಾಗ್ಸ್ ಮತ್ತು ಬಾಂಬ್ ಸ್ಕ್ವಾಡ್ ಮತ್ತು ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ನಾರ್ತ್ ಬ್ಲಾಕ್‌ನಲ್ಲಿ ಹೆಚ್ಚಿನ ಶೋಧ ನಡೆಸುತ್ತಿದ್ದಾರೆ.

ಶಾಲೆಗಳು, ಆಸ್ಪತ್ರೆಗಳು, ವಿಮಾನ ನಿಲ್ದಾಣಗಳು ಮತ್ತು ಸರ್ಕಾರಿ ಕಟ್ಟಡಗಳು ಸೇರಿದಂತೆ ಹಲವು ಸಂಸ್ಥೆಗಳು ಕಳೆದ ತಿಂಗಳಿನಿಂದ ಬೆದರಿಕೆ ಕರೆ, ಮೇಲ್‌ ಬರುತ್ತಲೇ ಇದೆ.