ಶಾಲೆಗೆ ಹೋಗ್ತಿದ್ದ 20ಕ್ಕೂ ಹೆಚ್ಚು ಮಕ್ಕಳ ಮೇಲೆ ಜೇನು ದಾಳಿ – 16 ಮಂದಿ ಗಂಭೀರ

ಕಾರವಾರ: ಶಾಲೆಗೆ ಬರುತ್ತಿದ್ದ 20ಕ್ಕೂ ಹೆಚ್ಚು ಮಕ್ಕಳಿಗೆ ಜೇನು ನೊಣ ಕಡಿದ ಘಟನೆ ಕಾರವಾರ ತಾಲೂಕಿನ ಕಿನ್ನರ ಗ್ರಾಮದ ನ್ಯೂ ಹೈಸ್ಕೂಲ್ ನಲ್ಲಿ ಇಂದು ನಡೆದಿದೆ.

ಜೇನು ಕಡಿತದಿಂದ 16 ಜನ ಮಕ್ಕಳು ಗಂಭೀರ ಗಾಯಗೊಂಡು ಅಸ್ವಸ್ಥರಾಗಿದ್ದು, ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂದು ಬೆಳಗ್ಗೆ ಶಾಲೆಗೆ ಮಕ್ಕಳು ಹೋಗುತ್ತಿರುವಾಗ ಏಕಾಏಕಿ ಶಾಲೆಯ ಪಕ್ಕದಲ್ಲೇ ಇರುವ ತೆಂಗಿನಮರದಲ್ಲಿ ಗೂಡುಕಟ್ಟಿದ್ದ ಜೇನುನೊಣ ದಾಳಿ ಮಾಡಿದೆ. ಇದನ್ನೂ ಓದಿ: ನನಗೆ ವಯಸ್ಸಾಗಿಲ್ಲ, ಕೈ ಹಿಡ್ಕೋಬೇಡಪ್ಪಾ: ಸಿದ್ದರಾಮಯ್ಯ

ಈ ಪರಿಣಾಮ 20ಕ್ಕೂ ಹೆಚ್ಚು ಮಕ್ಕಳಿಗೆ ಜೇನು ಕಡಿದಿದೆ. ತಕ್ಷಣಕ್ಕೆ 16 ಜನರು ಮಕ್ಕಳನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದಲ್ಲದೇ ಗ್ರಾಮದ ಓರ್ವ ಪುರುಷ ಹಾಗೂ ಮಹಿಳೆಗೂ ಜೇನು ಕಚ್ಚಿದ್ದು, ಗಂಭೀರ ಗಾಯಗೊಂಡ ಇವರನ್ನು ಸಹ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಗೆ ಶಾಸಕಿ ಭೇಟಿ!
ಘಟನೆ ನಡೆದ ವಿಷಯ ತಿಳಿದ ಕಾರವಾರದ ಶಾಸಕಿ ರೂಪಾಲಿ ನಾಯ್ಕ್ ಅವರು ಸ್ಥಳಕ್ಕೆ ಭೇಟಿ ನೀಡಿ ಮಕ್ಕಳ ಸ್ಥಿತಿಗತಿ ವಿಚಾರಿಸಿದರು. ಇದೇ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಕ್ಕಳ ಮೇಲೆ ಜೇನು ಕಚ್ಚಿ ಹೆಚ್ಚಿನ ಹಾನಿ ಮಾಡಿದೆ. ಇದಕ್ಕೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚಿಸಲಾಗಿದೆ. ಅರಣ್ಯ ಇಲಾಖೆಗೂ ಸಹ ಸೂಚನೆ ನೀಡಲಾಗಿದ್ದು, ಶಾಲಾ ಆವರಣದಲ್ಲಿ ಇರುವ ಜೇನನ್ನು ತೆರವುಗೊಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಹೆಚ್ಚಿದ ಜೇನು ಹಾವಳಿ
ಕಾರವಾರ ಮತ್ತು ಅಂಕೋಲ ಭಾಗದಲ್ಲಿ ದಿನದಿಂದ ದಿನಕ್ಕೆ ಜೇನು ಹಾವಳಿ ಮಿತಿಮೀರುತ್ತಿದೆ. ಡಿ.23 ರಂದು ಅಂಕೋಲದ ಅಜ್ಜಿಕಟ್ಟದ ನಿಲಂಪುರದಲ್ಲಿ ಹಸನ್ ಖಾನ್ ಕರೀಂ ಖಾನ್ ಎಂಬವವರು ಜೇನು ಕಡಿದು ಮೃತರಾಗಿದ್ದರು. ಇದನ್ನೂ ಓದಿ: ಪಕ್ಷದ ಆಂತರಿಕ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ಕಾಣಿಸಲಾಗೋದು: ಮಹಾಂತೇಶ್ ಕವಟಗಿಮಠ

ಕಾರವಾರ ಅಂಕೊಲ ಭಾಗದಲ್ಲಿ ಕಳೆದ ಒಂದು ವಾರದಲ್ಲಿ 60ಕ್ಕೂ ಹೆಚ್ಚು ಜನರಿಗೆ ಜೇನು ಕಡಿದ ವರದಿಯಾಗಿದೆ.

Comments

Leave a Reply

Your email address will not be published. Required fields are marked *