ಮೋದಿ ಮತ್ತೆ ಪ್ರಧಾನಿಯಾಗಲಿ: ಮುಲಾಯಂ ಸಿಂಗ್ ಯಾದವ್

ನವದೆಹಲಿ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮಾಜಿ ರಾಷ್ಟ್ರಾಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಹೇಳುವ ಮೂಲಕ ವಿಪಕ್ಷಗಳಿಗೆ ಶಾಕ್ ನೀಡಿದ್ದಾರೆ.

ಇಂದು ಲೋಕಸಭಾ ಅಧಿವೇಶನಲ್ಲಿ ಮಾತನಾಡಿದ ಅವರು, ಸದನದಲ್ಲಿ ಸೇರಿರುವ ಎಲ್ಲ ಸದಸ್ಯರಿಗೂ ನಾನೊಂದು ಮನನಿ ಸಲ್ಲಿರುತ್ತಿರುವೆ. ನರೇಂದ್ರ ಮೋದಿ ಅವರನ್ನು ನಾನು ಅಭಿನಂದಿಸುತ್ತಿದ್ದೇನೆ. ಮೋದಿ ಮತ್ತೊಂದು ಅವಧಿಗೆ ಪ್ರಧಾನಿಯಾಗಿ ಮಾಡಿ ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದು ಕೈಮುಗಿದು ಕೇಳಿಕೊಂಡಿದ್ದಾರೆ.

ನಾನು ಮೋದಿ ಅವರನ್ನು ಭೇಟಿಯಾಗಿ ಯಾವೆಲ್ಲ ಕೆಲಸ ಮಾಡಬೇಕು ಎಂದು ಹೇಳಿದ್ದೇನೋ ಆ ಎಲ್ಲ ಕೆಲಸಗಳು ಪೂರ್ಣವಾಗಿದೆ. ಈ ಅನುಭವ ನನಗೆ ಆಗಿದೆ ಎಂದು ಹೇಳಿ ಪ್ರಧಾನಿ ಕೆಲಸವನ್ನು ಹೊಗಳಿದ್ದಾರೆ. ಮುಲಾಯಂ ಸಿಂಗ್ ಈ ರೀತಿ ಹೇಳುವಾಗ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಹತ್ತಿರವೇ ಕುಳಿತಿದ್ದರು.

ಈ ವೇಳೆ ಆಡಳಿತ ಪಕ್ಷದ ಸದಸ್ಯರು ಮೆಜು ತಟ್ಟಿ ಮುಲಾಯಂ ಸಿಂಗ್ ಯಾದವ್ ಅವರಿಗೆ ಬೆಂಬಲ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಕೂಡ ಕೈಮುಗಿದು ನಗೆ ಬೀರಿ ಕೈ ಮುಗಿದು ಧನ್ಯವಾದ ತಿಳಿಸಿದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಪ್ರಧಾನಿ ಮೋದಿ ಅವರನ್ನು ಕಟ್ಟಿಹಾಕಲು ಮುಲಾಯಂ ಸಿಂಗ್ ಯಾದವ್ ಅವರ ಪುತ್ರ ಅಖಿಲೇಶ್ ಯಾದವ್ ರಣತಂತ್ರ ರೂಪಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ಜೊತೆ ಸೇರಿ ಉತ್ತರ ಪ್ರದೇಶದ ಸೀಟ್‍ಗಳನ್ನು ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ರಾಷ್ಟ್ರಮಟ್ಟದಲ್ಲಿ ಮಹಾಘಟಬಂಧನದಲ್ಲೂ ಅಖಿಲೇಶ್ ಯಾದವ್ ಗುರುತಿಸಿಕೊಂಡಿದ್ದಾರೆ.

ಒಂದು ಕಡೆ ಪುತ್ರ ಅಖಿಲೇಶ್ ಯಾದವ್ ಅವರು ಬಿಜೆಪಿಯನ್ನು ಸೋಲಿಸಲು ಮುಂದಾಗಿದರೆ, ತಂದೆ ಮುಲಾಯಂ ಸಿಂಗ್ ಯಾದವ್ ನರೇಂದ್ರ ಮೋದಿ ಅವರೇ ಮತ್ತೊಂದು ಅವಧಿಗೆ ಪ್ರಧಾನಿಯಾಗಲಿ ಎಂದು ಮನವಿ ಮಾಡಿಕೊಂಡಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *